ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
T. Krishnamurthy assumes office as Deputy Secretary of Koppal Zilla Panchayat
ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
ಕೊಪ್ಪಳ 01: ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅವರು ಜುಲೈ. 31 ರಂದು ಗುರುವಾರ ಅಫರಾಹ್ನ ಅಧಿಕಾರ ಸ್ವೀಕರಿಸಿದರು.ಕೊಪ್ಪಳ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಧಾರವಾಡ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಈ ಸ್ಥಾನಕ್ಕೆ ಟಿ.ಕೃಷ್ಣಮೂರ್ತಿ ಅವರನ್ನು ಸರ್ಕಾರದ ನೇಮಿಸಿದೆ.
ಟಿ.ಕೃಷ್ಣಮೂರ್ತಿ ಅವರು ವಿಜಯಪುರ ಜಿಲ್ಲೆಯ ಸಹಕಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಈ ಹಿಂದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಯೋಜನಾ ನಿರ್ದೇಶಕ ಪ್ರಕಾಶ ವಿ. ಸೇರಿದಂತೆ ಜಿಲ್ಲಾ ಪಂಚಾಯತ್ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 