ಬೆಂಗಳೂರು, ನ.27- ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡುವ ಸಂಬಂಧ ತಮಿಳುನಾಡು ಸಕರ್ಾರದ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ರಾಜ್ಯ ಸಕರ್ಾರ ಸಿದ್ಧವಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನ ಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನವಾಗುವುದರಿಂದ ರಾಜ್ಯಕ್ಕಾಗಲಿ ಅಥವಾ ತಮಿಳುನಾಡಿಗಾಗಲೀ ಯಾವುದೇ ತೊಂದರೆಯಾಗುವುದಿಲ್ಲ. ಇದು ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಕನರ್ಾಟಕಕ್ಕೆ ಅಗತ್ಯವಿದೆ ಎಂಬುದನ್ನು ಮನವರಿಕೆ ಮಾಡಿಕೊಡಲು ಸಿದ್ಧ ಎಂದು ಹೇಳಿದರು.
ತಮಿಳುನಾಡು ಸಕರ್ಾರ ಮಾತುಕತೆಗೆ ಆಹ್ವಾನಿಸಿದರೆ ಖುದ್ದು ನಾನೇ ಹೋಗಲು ಸಿದ್ದನಿದ್ದೇನೆ. ಒಂದು ವೇಳೆ ತಮಿಳುನಾಡಿನಿಂದ ಬಂದರೂ ಮಾತುಕತೆ ನಡೆಸಲು ನಾವು ಸಿದ್ದ. ಇದರಲ್ಲಿ ಯಾವುದೇ ರಾಜ್ಯಗಳು ಪ್ರತಿಷ್ಠೆ ಮಾಡುವ ಅಗತ್ಯವಿಲ್ಲ. ನಮಗೆ ಕುಡಿಯುವ ನೀರು ಅಗತ್ಯವಿರುವುದರಿಂದ ಈ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ. ಈಗಾಗಲೇ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರೂ ನೆರೆ ರಾಜ್ಯ ಯಾವ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಮಗೆ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಜಲ ಆಯೋಗ ಯೋಜನೆ ಆರಂಭಿಸಲು ನಮಗೆ ಅನುಮತಿ ನೀಡಿದೆ.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚಚರ್ಿಸಿ ಯೋಜನೆಯ ರೂಪುರೇಷೆಗಳನ್ನು ತಿಳಿಸಲಾಗುವುದು.ಡಿ.6ರಂದು ಕರೆದಿರುವ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಮಾಜಿ ನೀರಾವರಿ ಸಚಿವರು, ಕಾನೂನು ತಜ್ಞರು ಭಾಗವಹಿಸಲಿದ್ದಾರೆ. ಅಲ್ಲಿ ಚಚರ್ಿಸಿ ಅಂತಿಮವಾದ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇವೆ ಎಂದು ಹೇಳಿದರು.
ಹಂಪಿ ಉತ್ಸವ ರದ್ದು:
ಬಳ್ಳಾರಿಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ. ಮುಂದಿನ ವರ್ಷ ಯಥಾ ಪ್ರಕಾರ ನಡೆಯಲಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಜಿಲ್ಲೆಯ 9 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇಂತಹ ಸಂದರ್ಭದಲ್ಲಿ ಹಂಪಿ ಉತ್ಸವವನ್ನು ಆಚರಣೆ ಮಾಡುವುದು ಅಷ್ಟು ಸಮಂಜಸವಲ್ಲ ಎಂದು ಕೆಲವರು ಸಲಹೆ ನೀಡಿದ್ದಾರೆ.ಜತೆಗೆ ಉತ್ಸವವನ್ನು ಆಚರಿಸಬೇಕೆಂದರೆ ಕನಿಷ್ಠ ಒಂದು ತಿಂಗಳು ಮುಂಚಿತವಾಗಿ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಜಿಲ್ಲಾಡಳಿತದ ಜತೆ ಚಚರ್ಿಸಿ ಉತ್ಸವವನ್ನು ನಡೆಸದಿರಲು ತೀಮರ್ಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಗಣಿಗಾರಿಕೆ ಉದ್ಯಮಿಗಳು, ಕೈಗಾರಿಕೆ ಉದ್ಯಮಿಗಳ ಜತೆ ಚಚರ್ೆ ನಡೆಸಲಾಗಿದೆ.ಯಾವ್ಯಾವ ಭಾಗದಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಮತ್ತಿತರ ಸೌಲಭ್ಯ ಕಲ್ಪಿಸಿಕೊಡಬೇಕು ಎಂಬುದರ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇವೆ. ಪ್ರತಿಯೊಂದು ತಾಲ್ಲೂಕುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ಜತೆ ಚಚರ್ಿಸಲಾಗುವುದು.ಇನ್ನು ಜಿಲ್ಲೆಯಲ್ಲಿ ಬರಗಾಲ ಆವರಿಸಿರುವುದರಿಂದ ಗ್ರಾಪಂ ಸದಸ್ಯರಿಂದ ಹಿಡಿದು ಎಲ್ಲಾ ಜನಪ್ರತಿನಿಧಿಗಳು, ಪ್ರತಿಯೊಂದು ಇಲಾಖೆ ಅಧಿಕಾರಿಗಳು, ಡಿಸಿ, ಜಿಲ್ಲಾ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಸೇರಿದಂತೆ ಪ್ರತಿಯೊಬ್ಬರೂ ಗ್ರಾಮದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಬೇಕು.ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲೇ ಕುಳಿತು ಕೆಲಸ ಮಾಡುವ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.