‘ಯುವನಿಧಿ’ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ : ಯುವಮುಖಂಡ ಹಾಗೂ ಸಮಾಜಸೇವಕ ಮಂಜುನಾಥ.ಎಸ್‌.ಕಟ್ಟಿಮನಿ

Take Benefit of 'Yuvanidhi' Scheme: Youth Leader and Social Worker Manjunatha.S.Kattimani

 ‘ಯುವನಿಧಿ’ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ : ಯುವಮುಖಂಡ ಹಾಗೂ ಸಮಾಜಸೇವಕ ಮಂಜುನಾಥ.ಎಸ್‌.ಕಟ್ಟಿಮನಿ  

ವಿಜಯಪುರ  10: ರಾಜ್ಯ ಕಾಂಗ್ರೇಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ. ಆದ್ದರಿಂದ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲೆಯ ಯುವಮುಖಂಡ ಹಾಗೂ ಸಮಾಜಸೇವಕ ಮಂಜುನಾಥ.ಎಸ್‌.ಕಟ್ಟಿಮನಿ ಅವರು ತಿಳಿಸಿದ್ದಾರೆ. 

2022-23 ಮತ್ತು 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದವರು ಯುವನಿಧಿ ಯೋಜನೆಯಡಿ ಮಾಸಿಕ ನಿರುದ್ಯೋಗಿ ಭತ್ಯೆ ಪಡೆಯಲು ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ ಸೇವಾಸಿಂಧು ವೆಬ್ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳು ಕರ್ನಾಟಕ ಒನ್‌/ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ. 

ಈ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ? 1000 ಹಾಗೂ ಡಿಪ್ಲೋಮಾ ಉತ್ತೀರ್ಣರಾದವರಿಗೆ ?1,500 ನಿರುದ್ಯೋಗಿ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ. ಫಲಿತಾಂಶದ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿ ನಂತರವೂ ನಿರುದ್ಯೋಗಿಗಳಾಗಿದ್ದಲ್ಲಿ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಪ್ರತಿ ತಿಂಗಳು ತಾನು ನಿರುದ್ಯೋಗಿ ಎಂದು ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. 

ಯುವಜನರು ದೇಶದ ಆಸ್ತಿಯಾಗಿದ್ದಾರೆ. ಆದ್ದರಿಂದ ಈ ‘ಯುವನಿಧಿ’ ಯೋಜನೆಯ ಅನುಷ್ಠಾನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ನಿರ್ಲಕ್ಷ ತೋರದೇ ಪ್ರಾಮಾಣಿಕವಾಗಿ ಶ್ರಮವಹಿಸಿ ಕಾರ್ಯನಿರ್ವಹಿಸುವ ಮೂಲಕ ಈ ಯೋಜನೆಯನ್ನು ಸಂಪೂರ್ಣ ಯಶಸ್ವಿಗೊಳಿಸಬೇಕು. ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಕಲಿ ಪ್ರಮಾಣಪತ್ರ ಸಲ್ಲಿಕೆಯಾಗದಂತೆಯೂ ನಿಗಾ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. 

ಅಧಿಕಾರಿಗಳು ಪದವಿ ಕಾಲೇಜುಗಳು, ಡಿಪ್ಲೊಮಾ, ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರ ಜೊತೆ ತಕ್ಷಣ ಸಭೆ ನಡೆಸಿ ಹೆಚ್ಚಿನ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಯುವಜನರ ಅದರಲ್ಲೂ ನಿರುದ್ಯೋಗಿ ಯುವಜನರ ಬಾಳಿನ ಭರವಸೆಯ ಬೆಳಕಾಗಿರುವ ಈ ಯೋಜನೆಯು ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು’ ಎಂದೂ ಅವರು ವಿನಂತಿಸಿದ್ದಾರೆ. 

ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಕುರಿತಂತೆ ಅಧಿಕಾರಿಗಳು ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು. ಇದಕ್ಕಾಗಿ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸಿಕೊಳ್ಳಬೇಕು. ವಾಟ್ಸ್‌್ಪ, ಫೇಸ್‌ಬುಕ್, ಇನ್ಸ್ಟಾಗ್ರಾಂ, ಎಸ್‌ಎಂಎಸ್ ಸೇರಿದಂತೆ ಎಲ್ಲ ವೇದಿಕೆಗಳನ್ನು ಬಳಸಿಕೊಳ್ಳಬೇಕು. ಈ ಕುರಿತು ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ, ಕಾಲೇಜುಗಳ ಮುಂಭಾಗದಲ್ಲಿ ಕಟೌಟ್, ಹೋಡಿಂರ್ಗ್ ಹಾಕಬೇಕು. ಈ ಮೂಲಕ ಯೋಜನೆಯ ಬಗ್ಗೆ ಯುವಜನರಿಗೆ ಇನ್ನಷ್ಟು ಮನವರಿಕೆ ಮಾಡಿಕೊಡಬೇಕು’ ಎಂದು ಅವರು ಸಲಹೆ ನೀಡಿದ್ದಾರೆ. 

ಇನ್ನು ಈ ‘ಯುವನಿಧಿ’ ಯೋಜನೆಯ ಬಗ್ಗೆ ಉಚಿತವಾಗಿ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಹಾಗೂ ನೋಂದಣಿಗೆ ಸಂಬಂಧಿಸಿದಂತೆ ಯಾರಾದರೂ ಮಧ್ಯವರ್ತಿಗಳಂತೆ ವರ್ತಿಸಿ ಒಂದು ವೇಳೆ ಹಣಕ್ಕಾಗಿ ಬೇಡಿಕೆ ಇಟ್ಟರೆ ಕೂಡಲೇ ಯುವಜನರು ತಮ್ಮನ್ನು (ಮೊ:9353838103 ಸಂಖ್ಯೆಗೆ ವಾಟ್ಸಪ್ ಮೆಸೇಜ್ ಮೂಲಕ) ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.