ಕೊಪ್ಪಳ 06: ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಾಗದಂತೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು (ಆಗಸ್ಟ್.06) ಜಿ.ಪಂ. ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕೊಪ್ಪಳ ಇಲಾಖೆಯಡಿ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಅನುಷ್ಠಾನಗೊಳಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತು ಪ್ರಗತಿ ಪರಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಾಗದಂತೆ ಕ್ರಮವಹಿಸಬೇಕಾಗಿದ್ದು, ಕೆ.ಆರ್.ಐ.ಡಿ.ಎ. ಅಧಿಕಾರಿಗಳಿಗೆ ತಮ್ಮ ಅಧಿನದ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆಯಲ್ಲಿರುವಂತೆ ಕ್ರಮವಹಿಸಬೇಕು. ಘಟಕಗಳಿಂದ ಶುದ್ಧ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ಪೂರೈಸಲು ಕ್ರಮವಹಿಸಿ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಉಪ ವಿಭಾಗದ ಅಧಿಕಾರಿಗಳು ಜಂಟಿಯಾಗಿ ಖುದ್ದಾಗಿ ಭೇಟಿ ನೀಡಿ ಚಾಲನೆಯಲ್ಲಿರುವುದೇ ಅಥವಾ ಯಾವುದೇ ಸಮಸ್ಯೆಯಿಂದ ಸ್ಥಗೀತಗೊಂಡಿರುವುದೇ ಎಂಬ ಬಗ್ಗೆ ಪರಿಶೀಲಿಸಬೇಕು. ಸಮಸ್ಯೆಗಳು ಇರುವಂತಹ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಚಾಲನೆಯಲ್ಲಿಡಲು ಸೂಕ್ತ ಕ್ರಮವನ್ನು ತ್ವರಿತವಾಗಿ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು, ಈ ಕುರಿತಂತೆ ಶೀಘ್ರವಾಗಿ ಕ್ರಮ ಕೈಗೊಂಡು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಚಾಲನೆಯಲ್ಲಿಡಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿ.ಪಂ. ಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿರವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ ಮೂತರ್ಿರವರು ಮಾತನಾಡಿ, ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತೊಂದರೆಗಿಡಾದ ಘಟಕಗಳನ್ನು ಗುರುತ್ತಿಸಿ ಕೂಡಲೇ ಅವುಗಳನ್ನು ವ್ಯವಸ್ಥಿತವಾಗಿ ಸರಿಪಡಿಸಿ ಗ್ರಾಮಸ್ಥರಿಗೆ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ಘಟಕಗಳು ವಿದ್ಯುತ್ ಸಮಸ್ಯೆಗಳಿಂದ ಸ್ಥಗೀತಗೊಂಡಿದ್ದಲ್ಲಿ ಅಂತಹ ಸಮಸ್ಯೆಗಳನ್ನು ಪರಿಹರಿಸಿ ಘಟಕಗಳನ್ನು ಚಾಲನೆಯಲ್ಲಿರುವಂತೆ ಜೆಸ್ಕಾಂ ಅಧಿಕಾರಿಳು ಕ್ರಮವಹಿಸಬೇಕು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಈ ಕುರಿತಂತೆ ಶೀಘ್ರವಾಗಿ ಕ್ರಮ ಕೈಗೊಂಡು ಜನರಿಗೆ ಕುಡಿಯುವ ನೀರು ಪೂರೈಸಬೇಕು ಎಂದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದಶರ್ಿ ಎನ್.ಕೆ. ತೊರವಿ ಸೇರಿದಂತೆ ಗ್ರಾ.ಕು.ನೀ. ಮತ್ತು ನೈ. ವಿಭಾಗದ ಕಾರ್ಯನಿವರ್ಾಹಕ ಅಭಿಯಂತರರು, ಕೆ.ಆರ್.ಐ.ಡಿ.ಎ. ಕಾರ್ಯನಿವರ್ಾಹಕ ಅಭಿಯಂತರರು, ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.