ಲೋಕದರ್ಶನ ವರದಿ
ಬೆಳಗಾವಿ, 11:ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವ ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಉದ್ದೇಶದಿಂದ ಸ್ಥಾಪಿತವಾದ, ರಾಜ್ಯಮಟ್ಟದ ಸ್ವಾಯತ್ತ ಸಂಸ್ಥೆಯಾಗಿದೆ. ವಿಜ್ಞಾನ, ವೈಜ್ಞಾನಿಕ ಮನೋಧರ್ಮ ಜನರಲ್ಲಿ, ಅದರಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿಪಡಿಸಿ, ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ, ವಿಚಾರಸಂಕಿರಣ, ವಸ್ತುಪ್ರದರ್ಶನಗಳನ್ನು ಮತ್ತು ವಿಜ್ಞಾನ ಪುಸ್ತಕಗಳು ಹಾಗೂ ನಿಯತಕಾಲಿಕಗಳನ್ನು ಪ್ರಕಟಿಸಿ ವಿತರಣೆ ಮಾಡುವುದರ ಮೂಲಕ ವಿಜ್ಞಾನವನ್ನು ಜನಪ್ರಿಯಗೊಳಿಸುವುದು.
ವಿಜ್ಞಾನ ಕೇಂದ್ರಗಳ ಸ್ಥಾಪನೆ, ನಿರ್ವಹಣೆ ಹಾಗೂ ವಿಜ್ಞಾನ ಬರಹಗಾರರು, ವಿಜ್ಞಾನಿಗಳು, ವಿಜ್ಞಾನ ಶಿಕ್ಷಕರು, ಕೈಗಾರಿಕೋದ್ಯಮಿಗಳು, ಪ್ರಕಾಶಕರು ಮತ್ತು ವಿಜ್ಞಾನವನ್ನು ಜನಪ್ರಿಯಗೊಳಿಸುವುದರಲ್ಲಿ ಆಸಕ್ತರಾಗಿರುವವರ ನಡುವೆ ಪರಸ್ಪರ ಸಂಪರ್ಕ ಬೆಳೆಯಲು ಪ್ರೋತ್ಸಾಹ ನೀಡುವುದು ವಿಜ್ಞಾನ ಪರಿಷತ್ತಿನ ಪ್ರಮುಖ ಉದ್ದೇಶಗಳಾಗಿವೆ. ನಾಡಿನ ಜನತೆ ವಿಜ್ಞಾನ ಪರಿಷತ್ತಿನ ಚಟುವಟಿಕೆಗಳ ಲಾಭ ಪಡೆಯಬೇಕೆಂದು ವಿಜ್ಞಾನ ಪರಿಷತ್ತಿನ ಸದಸ್ಯ ಹಾಗೂ ಆರ್. ಎಲ್. ವಿಜ್ಞಾನ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ|| ಯು. ಆರ್. ರಜಪೂತ ತಿಳಿಸಿದರು.
ಅವರು ಇಂದು ನಗರದ ಟಾಪರ್ಸ ತರಬೇತಿ ಕೇಂದ್ರದಲ್ಲಿ ಡಾ|| ಸ. ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ತಿನ 38 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಸೋಶೀಯೇಷನ್ ಫಾರ್ ಸೈನ್ಸ ಎಜ್ಯಕೇಶನ್ ಕಾರ್ಯದಶರ್ಿ ರಾಜನಂದ ಘಾಗರ್ಿ ಮಾತನಾಡಿ ರಾಜ್ಯದಲ್ಲಿ ವಿಜ್ಞಾನ ಪ್ರಸಾರ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕನರ್ಾಟಕ ರಾಜ್ಯ ವಿಜ್ಞಾನ ಪರಿಷತ್ತು ಜನಪರ ವೈಜ್ಞಾನಿಕ ಕಾರ್ಯಕ್ರಮಗಳ ಆಯೋಜಿಸುವಲ್ಲಿ ಶ್ರಮಿಸುತ್ತಿದೆ ಎಂದರು.
ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಸ್ವಾಗತಿಸಿ ನಿರೂಪಿಸಿದರು. ಟಾಪರ್ಸ ತರಬೇತಿ ಕೇಂದ್ರದ ಸಂಯೋಜಕ ಪ್ರವೀಣ ಪಾಟೀಲ
ವಂದಿಸಿದರು.