ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಿ: ಎಚ್. ವಿಶ್ವನಾಥರೆಡ್ಡಿ

ಕೊಪ್ಪಳ 29: ಕೊಪ್ಪಳ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಈ ಸಮಸ್ಯೆಗಳ ಇತ್ಯರ್ಥಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಸಭಾಂಗಣದಲ್ಲಿ ಗುರುವಾರದಂದು ಆಯೋಜಿಸಲಾದ ಜಿ.ಪಂ. ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ವಿವಿಧೆಡೆ ಕುಡಿಯುವ ನೀರಿನ ಪೈಪ್ಲೈನ್ಗಳು ಹೊಡೆದು ಹೋಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಕಲುಶಿತ ನೀರುವ ಸರಬರಾಜು ಆಗುತ್ತಿದೆ.  ಅಲ್ಲದೇ ವಿವಿಧ ಹಳ್ಳಿಗಳಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯಿಂದಾಗಿ ಜನರಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಘಟಕ ದುರಸ್ಥಿ, ಪ್ರಾರಂಭಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.  ನೀರಿನ ಸಮಸ್ಯೆ ಯಾವ ಭಾಗಗಳಲ್ಲಿದೆ ಎಂಬ ಮಾಹಿತಿ ಪಡೆದು ಕೂಡಲೇ ಅಧಿಕಾರಿಗಳು ನೀರಿನ ಸಮಸ್ಯೆ ಇರುವಂತಹ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸಬೇಕು.  ಇನ್ನೂ ಯಾವ-ಯಾವ ಗ್ರಾಮೀಣ ಪ್ರದೇಶಗಳಲ್ಲಿ ಆರ್ಓ ಪ್ಲಾಂಟ್ಗಳನ್ನು ಸ್ಥಾಪಿಸಬೇಕು ಹಾಗೂ ಸ್ಥಗಿತಗೊಂಡ ಘಟಕಗಳ ದುರಸ್ಥಿ ಕಾರ್ಯವನ್ನು ಸಂಬಂಧಿಸಿದ ಕಂಪನಿಗಳಿಂದ ಕೈಗೊಂಡು ಈ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. 

ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಸಾವಯವ ಗೊಬ್ಬರ, ಕೃಷಿ ಕ್ಷೇತ್ರಾಭಿವೃದ್ಧಿ ಸೇರಿದಂತೆ ವಿವಿಧ ಕೃಷಿ ಯೋಜನೆಗಳ ಸೌಲಭ್ಯದಿಂದ ಜಿಲ್ಲೆಯ ಅರ್ಹ ರೈತರು  ವಂಚಿತರಾಗಬಾರದು.  ಈ ದಿಶೆಯಲ್ಲಿ ಕೃಷಿ ಇಲಾಖೆಯವರು ರೈತರಿಗೆ ನಿರಂತರ ಜಾಗೃತಿ ಮೂಡಿಸಲು ಜಿಲ್ಲೆಯ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಕೃಷಿ ಇಲಾಖೆಯ ಯೋಜನೆ, ಸೌಲಭ್ಯಗಳ ಕುರಿತು ಪ್ರಚಾರ ಕೈಗೊಳ್ಳಬೇಕು ಎಂದರು. 

ರೈತರು ಕೃಷಿಯೊಂದಿಗೆ ದನ-ಕರು, ಕುರಿ-ಮೇಕೆ ಹೀಗೆ ಅನೇಕ ಜಾನುವಾರುಗಳನ್ನು  ಸಾಕಿಕೊಂಡಿದ್ದು, ಅವುಗಳನ್ನು  ಹಾಗೂ ಗೊಬ್ಬರವನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಾರೆ. ಹೀಗಾಗಿ ಜಾನುವಾರುಗಳ ರಕ್ಷಣೆ ರೈತರಿಗೆ ಅತ್ಯವಶ್ಯವಾಗಿದ್ದು, ಕಾಲಕಾಲಕ್ಕೆ ತಕ್ಕಂತೆ ಜಾನುವಾರುಗಳ ಲಸಿಕೆ, ಔಷದೋಪಚಾರ ಮಾಡಿಕೊಳ್ಳಲು ರೈತರಿಗೆ ಅರಿವು ಮೂಡಿಸಿ, ಜಾನುವಾರುಗಳಿಗೆ ರೋಗನಿರೋಧಕ ಲಸಿಕೆ, ಚುಚ್ಚು ಮದ್ದು ಹಾಕಿಸುವಂತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ರಘುನಂದನ್ ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ವ್ಯವಸ್ಥೆಯನ್ನು 43 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನೂ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಒಂದು ತಿಂಗಳವರೆಗೆ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.  

 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರ ಹನುಮಂತ ಗೌಡ ಪಾಟೀಲ್, ಹಾಗೂ ಜಿ.ಪಂ. ಸದಸ್ಯರು,  ಉಪಕಾರ್ಯದರ್ಶಿ  ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.