ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: -ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್
Take precautions to avoid drinking water problems in summer: - District In-charge Minister Santosh
ಧಾರವಾಡ ಫೆ 23: ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಮತ್ತು ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ಅವರು ಇಂದು (ಫೆ.23) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2025-26 ನೇ ಸಾಲಿನ ಡಿಸೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ 3 ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರೀಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಎಲ್ಲ ಸಂಬಂಧಿತ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಒಂದು ವೇಳೆ ಯಾವುದೇ ರೀತಿಯ ದೋಷಗಳು ಅಥವಾ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯದವರು ಕಾಲಕ್ಕೆ ತಕ್ಕಂತೆ ಹೊಸ ಹೊಸ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅವುಗಳ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಮತ್ತು ಪ್ರಸ್ತುತ ಮಾವಿನ ಗಿಡಗಳು ಹೂವು ಹಿಡಿದಿವೆ. ಅವುಗಳಿಗೆ ಜಿಗಿ ಆಗಿ ಮಾವಿನ ಕಾಯಿ ಹೂವುಗಳು ಉದುರುತ್ತಿವೆ. ಅವುಗಳ ಬಗ್ಗೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆಯವರು ರೈತರಿಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿ ಎಂದು ಹೇಳಿದರು.
ವಿಧಾನ ಪರಿಷತ್ತ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಅವರು ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿರುವ ಯೋಜನೆಗಳನ್ನು ಪಾರದರ್ಶಕವಾಗಿ ಮತ್ತು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಮೀಸಲಾತಿಗೆ ಅನುಗುಣವಾಗಿ ಅನುದಾನವನ್ನು ಬಳಕೆ ಮಾಡಬೇಕು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಂ. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿವಿಧ ಯೋಜನೆಗಳ ಪ್ರಗತಿ ಪರೀಶೀಲನೆ ಕುರಿತು ಮಾತನಾಡಿದರು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ರಾಷ್ಟ್ರೀಯ ಹೆದ್ದಾರಿ, ಪಂಚಾಯತ ರಾಜ್ ಇಂಜನೀಯರಿಂಗ್, ಲೋಕೊಪಯೋಗಿ, ಸಹಕಾರಿ, ಸಾರಿಗೆ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಮಾರಾಟ ಮಂಡಳಿ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡಿದರು.
ವೇದಿಕೆಯಲ್ಲಿ ವಿಧಾನ ಪರಿಷತ್ತ ಸದಸ್ಯ ಪ್ರದೀಪ ಶೆಟ್ಟರ, ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಇದ್ದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸ್ವಾಗತಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ರೀತೀಕಾ ವರ್ಮಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 