ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ - ಡಾ. ಓದ್ರಾಮ ಸೂಚನೆ
Take steps to ensure that more students register at the job fair - Dr. Odrama instructs
ವಿಜಯಪುರ, ಜ.31 : ಇದೇ ಫೆ.2ರಂದು ನಗರದ ದರ್ಬಾರ ಶಾಲಾ ಆವರಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಯುವ ಸಮೃದ್ಧಿ ಸಮ್ಮೇಳನ-ವಿಜಯಪುರ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಭಾಗವಹಿಸುವಂತೆ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಓದ್ರಾಮ ಅವರು ಸೂಚಿಸಿದರು.
ಅವರು,ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದ ಈವರೆಗಿನ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಜಿಲ್ಲೆಗಳು ಸೇರಿ ಇಲ್ಲಿವರೆಗೆ ಈ ಉದ್ಯೋಗ ಮೇಳಕ್ಕೆ ಒಟ್ಟು ಹದಿನಾರು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರ ಪೈಕಿ ವಿಜಯಪುರ ಜಿಲ್ಲೆಯಿಂದ ಎಂಟು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಇನ್ನಷ್ಟ್ಟು ಅಭ್ಯರ್ಥಿಗಳು ನೋಂದಾಯಿಸಿಕೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಲು ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಲು ಸೂಚನೆ ನೀಡಿದರು. ಪದವಿಪೂರ್ವ ಕಾಲೇಜುಗಳು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಾಲೇಜುಗಳು, ಐಟಿಐ, ಡಿಪ್ಲೊಮಾ, ಬಿ.ಎಡ್, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳು, ಅಕ್ಕಮಹಾದೇವಿ ವಿಶ್ವವಿದ್ಯಾಲಯ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಯಾ ಕಾಲೇಜಿನ ಪ್ರಾಚಾರ್ಯರು ಮಾಹಿತಿ ಒದಗಿಸಬೇಕು.
ವಹಿಸಿರುವ ಜವಾಬ್ದಾರಿಯನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸುವಂತೆಯೂ,ಉದ್ಯೋಗ ಮೇಳದ ಯಶಸ್ವಿಗೆ ಅಗತ್ಯಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಸೌದಗರ, ಬಾಗಲಕೋಟ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಗಳಾದ ಗುರುಪಾದಯ್ಯ ಹಿರೇಮಠ, ವಿಜಯಪುರ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಗಳಾದ ಮಹೇಶ್ ಮಾಳವಾಡೆಕರ, ವಿಜಯಪುರ ತಹಸೀಲ್ದಾರರಾದ ಪ್ರಶಾಂತ ಚನಗೊಂಡ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 