ಪೂರ್ವಸಿದ್ಧತಾ ಸಭೆಪರೀಕ್ಷೆಗಳು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ
ಗದಗ 9: ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17 ರಂದು ಜರುಗುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಅವ್ಯವಹಾರ, ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಶಿಸ್ತು ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪ್ರತಿಬಂಧಕಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 16 ಮತ್ತು 17 ರಂದು ಬೆ 8.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆ0ುಲ್ಲಿ ಕಾ0ುರ್ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ 0ಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿ0ುಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮೊಬೈಲ್ ಫೋನ್ , ಬ್ಲೂಟೂಥ್, ಸೈಡ್ ರೂಲ್ಸ್, ಕ್ಯಾಲ್‌ಕ್ಯುಲೇಟರ್ , ವೈಟ್ ಪ್ಲುಯಿಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ ಚೀಟಿ, ಬುಕ್/ ಪುಸ್ತಕ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಯಾವುದೇ ಅಕ್ರಮಕ್ಕೆ ಆಸ್ಪದ ನೀಡದೇ ಪಾರದರ್ಶಕವಾಗಿ ಜರುಗಿಸಬೇಕೆಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಮಾತನಾಡಿ ಪರೀಕ್ಷೆಯಲ್ಲಿ ಸಮಯ ಪರಿಪಾಲನೆ ಬಹಳ ಮುಖ್ಯವಾಗಿದ್ದು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಅವರು ಮಾತನಾಡಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. 3615 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಗಮವಾಗಿ ಜರುಗಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ, ಸಿ.ಸಿ.ಟಿವಿ ಅಳವಡಿಕೆ, ಸೂಕ್ತ ಬಂದೋಬಸ್ತ್ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಎಸ್.ಬುರುಡಿ, ಡಯಟ್ ಪ್ರಾಂಶುಪಾಲರಾದ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.