ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಯಶವಂತರಾಯಗೌಡ
Take steps to prevent drinking water problems during summer: Yashwantha Ray Gowda
ಇಂಡಿ 09: ತಾಲೂಕು ಪಂಚಾಯತ ಇಂಡಿ ಸಭಾ ಭವನದಲ್ಲಿ ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ರವರ ಘನ ಅಧ್ಯಕ್ಷತೆಯಲ್ಲಿ ವಿಜಯಪೂರ ಜಿಲ್ಲಾಧಿಕಾರಿ ಕೆ ಆನಂದ ರವರ ಉಪಸ್ಥಿತಿಯಲ್ಲಿ ತಾಲೂಕ ಆಡಳಿತ ಅಧಿಕಾರಿಗಳ ರವರ ಪ್ರಗತಿ ಪರೀಶೀಲನೆ ಸಭೆ ನಡೆಯಿತು.ವಿಜಯಪೂರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಆಡಳಿತ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಗುರುಸ್ವಾಮಿ ಉಪವಿಭಾಗಾಧಿಕಾರಿಗಳು ಇಂಡಿ, ತಹಶೀಲ್ದಾರ್ ಬಿ ಎಸ್ ಕಡಕಭಾವಿ ಇಂಡಿ ಪೊಲೀಸ ಉಪ ಅಧೀಕ್ಷಕರಾದ ಅರುಣ ಕಟ್ಟಿಮನಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ರವರು ಸಭೆಗೆ ಸ್ವಾಗತ ಕೋರಿ ಸಭೆಯನ್ನು ಪ್ರಾರಂಭಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ತಾಲೂಕಿನ ಎಲ್ಲಾ ವಿವಿಧ ಅಧಿಕಾರಿಗಳಿಗೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಸಮಸ್ಯೆ ಆಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂದಿಸಿದ ಅಧಿಕಾರಿಗಳ ರವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು ಮಾತನಾಡಿ ಬೇಸಿಗೆಯಲ್ಲಿ ಯಾವುದೇ ನೀರಿನ ಅಭಾವವಾಗದಂತೆ ಸಮರ್ಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ತಿಳಿದುಕೊಂಡು ಮಾಹಿತಿ ಸಲ್ಲಿಸಬೇಕು. ನಗರ ನೀರು ಸರಬರಾಜಿಗೆ ಸಂಬಂಧಿಸಿದ ಅಗತ್ಯ ಮುಜಾಗೃತಾ ಕ್ರಮವಹಿಸಬೇಕು. ಗ್ರಾಮ ಪಂಚಾಯತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಸಕರು ಇನ್ನಿತರ ವಿಷಯಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.ಕಳೆದ ವರ್ಷದಲ್ಲಿ ಅಂಜುಟಗಿ, ಕೊಳುರಗಿ, ಝಳಕಿ, ಹಡಲಸಂಗ, ಬಸನಾಳ, ಚವಡಿಹಾಳ ಚೊರಗಿ ನಿಂಬಾಳ ಕೆಡಿ ಚಿಕ್ಕ ಬೆವನೂರ ತಡವಲಗಾ ಸಾಲೋಟಗಿ ಇನ್ನೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿದ್ದು ಈ ಬಾರಿ ಯಾವುದೇ ಸಮಸ್ಯೆ ಆಗದಂತೆ ಮುಜಾಗ್ರತೆ ಕ್ರಮ ಕೈಗೊಳ್ಳಿ ಎಂದರು. ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ಖುದ್ದಾಗಿ ಪರೀಶೀಲನೆ ನಡೆಸಬೇಕು. ಎಲ್ಲಾ ಬೋರವೆಲ್ ಗಳ ಮಾಹಿತಿ ಕ್ರೋಢೀಕರಿಸಬೇಕು. ಚಾಲ್ತಿಯಲ್ಲಿರುವ ಬೋರವೆಲ್ ಗಳು ಪರೀಶೀಲನೆ ಮಾಡಬೇಕು. ದುರಸ್ತಿ ಅವಶ್ಯಕತೆ ಇರುವ ಬೋರವೆಲ್ ಗಳ ದುರಸ್ತಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ವಿಭಾಗದ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ತಾಲೂಕ ಪಂಚಾಯತ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 