15ನೇ ರಾಷ್ಟ್ರೀಯ ಮತದಾರರ ದಿನಾಚರಣೆ 2025 ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ

Taking oath as part of 15th National Voter's Day 2025

15ನೇ ರಾಷ್ಟ್ರೀಯ ಮತದಾರರ ದಿನಾಚರಣೆ 2025 ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ 

ವಿಜಯಪುರ ಜ.24 : ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯಲು ಮತದಾರರ ಪಾತ್ರ ಬಹು ಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಹೇಳಿದರು.  

15ನೇ ರಾಷ್ಟ್ರೀಯ ಮತದಾರರ ದಿನಾಚರಣೆ 2025 ಅಂಗವಾಗಿ  ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ  ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿವರ್ಷ ಭಾರತದಲ್ಲಿ ಲಕ್ಷಾಂತರ ಜನರು ಹೊಸದಾಗಿ ಮತದಾನದ ಹಕ್ಕನ್ನು ಹೊಂದುವರು. ಅಂತಹ ಮತದಾರರಿಗೆ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.  

ಮತದಾನದಲ್ಲಿ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ಅಗತ್ಯವಿದೆ. ಚುನಾವಣೆ ಬಂದಾಗ ಮತದಾರರನ್ನು ಜಾಗ್ರತಗೊಳಿಸುವ ಕಾರ್ಯಗಳು ನಿರಂತರವಾಗಿ ಜರುಗಬೇಕು ಎಂದು ಅವರು ಹೇಳಿದರು. 

  ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಬಿ. ಎಸ್‌. ರಾಠೋಡ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.