ಪ್ರತಿಭಾ ಪುರಸ್ಕಾರ ಮತ್ತು ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ
Talent Award and Literary and Cultural Arts Festival Program
ಹುಬ್ಬಳ್ಳಿ ಫೆ.21: ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಮುಂತಾದ ಸಮಾಜ ಸುಧಾರಕರು ಸಮಾಜದಲ್ಲಿ ದೊಡ್ಡ ಬದಲಾವಣೆ ತಂದಿದ್ದಾರೆ. ಅಲೆಮಾರಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸಲಾಗುವುದು. ಅಲೆಮಾರಿ ಜನಾಂಗದವರ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಒಕ್ಕೂಟದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬುದ್ಧ ಇಡೀ ಸಾಮ್ರಾಜ್ಯ ಹಿಟ್ಟು ಹೊರಟು ಹೋದ. ಇಂದಿನ ದಿನಮಾನಗಳಲ್ಲಿ ಬಡವರಿಗೆ ಸಹಾಯಹಸ್ತ ಚಾಚುವ ಕೈಗಳು ಕಡಿಮೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಲ್ಲಿ ಸುಮಾರು 42 ಪಂಗಡಗಳಿವೆ. ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಕಾರ್ಯಕ್ರಮದಲ್ಲಿ 102 ಪಂಗಡಗಳನ್ನು ಗುರುತಿಸಲಾಗಿದೆ. ಅಲೆಮಾರಿ ಜನಾಂಗದವರ ನೋವುಗಳು, ಸಂಕಷ್ಟಗಳನ್ನು ನಾನು ಕಂಡಿದ್ದೇನೆ. ಸಮಾಜದವರು ಒಂದೂಗೂಡಿ ಸಮಾಜದ ಏಳಿಗೆಗೆ ಮುಂದಾಗಬೇಕು ಎಂದು ಅವರು ತಿಳಿಸಿದರು. ಎಲ್ಲ ಪಂಗಡಗಳ ಸಮಾಜದವರು ಒಗ್ಗಟ್ಟಾಗಿ ಬಂದರೇ ನನ್ನ ಕೈಲಾದ ಸಹಾಯವನ್ನು ನಾನು ಮಾಡುತ್ತೇನೆ. ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗುವುದು. ಸುಮಾರು ಶೇ.60 ರಷ್ಟು ಹಿಂದುಳಿದ ವರ್ಗಗಳ ಜನರು ಅಸಂಘಟಿತ ವಲಯದಲ್ಲಿದ್ದಾರೆ.
ರಾಜ್ಯದಲ್ಲಿ 102 ಅಲೆಮಾರಿ ಪಂಗಡಗಳ ಸುಮಾರು 1.30 ಕೋಟಿ ಕುಟುಂಬಗಳಿವೆ. ಅವರಿಗೆ ರಾಜ್ಯ ಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಲೆಮಾರಿ ಜನಾಂಗದವರು ತಮ್ಮ ಸಮಾಜದ ಮುಂದಿನ ಪೀಳಿಗೆಗೆ ಸವಲತ್ತುಗಳನ್ನು ತಲುಪಿಸಬೇಕು. ಮೂಢನಂಬಿಕೆಗಳಿಂದ ನಾವೆಲ್ಲರೂ ದೂರವಿರಬೇಕಿದೆ. ಯಾವುದೇ ಸಮುದಾಯದ ಮೆರಿಟ್ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲಾಗುವುದು. ಏಪ್ರೀಲ್ ತಿಂಗಳಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಎಲ್ಲಾ ಸಮುದಾಯದ ಸ್ವಾಮೀಜಿಗಳು, ಪಕ್ಷಗಳ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಮಾದರಿ ಆಗುವಂತೆ ಕಾರ್ಯಕ್ರಮವನ್ನು ಮಾಡಲಾಗುವುದು ಎಂದರು. ಶಾಸಕರಾದ ಎಫ್.ಎಚ್.ಜಕ್ಕಪ್ಪನವರ ಮಾತನಾಡಿ, ಸಾಮಾಜಿಕ ನ್ಯಾಯಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರು ಭದ್ರ ಬುನಾದಿ ಹಾಕಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಜನಾಂಗದವರ ಏಳ್ಗಿಗೆಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ
. ಅಲೆಮಾರಿ ಜನಾಂಗದವರು ಮುನ್ನೆಲೆಗೆ ಬರಬೇಕು. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಬಹಳ ಅವಶ್ಯಕವಾಗಿದ್ದು, ಶಿಕ್ಷಣದಿಂದ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಧಾರವಾಡದಲ್ಲಿ ಇರುವಂತಹ ಬುದ್ಧ ರಕ್ಕಿತ ವಸತಿ ಶಾಲೆಗೆ ನಿಮ್ಮ ಮಕ್ಕಳನ್ನು ಸೇರಿಸಬೇಕು. ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಸಹಾಯ ಮಾಡುತ್ತೇನೆ ಎಂದರು. ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಯಾದಗಿರಿಯ ಜಗದ್ಗುರು ವೇದ ವ್ಯಾಸಪೀಠ ಕರತಳ್ಳಿಯ ಬ್ರಹ್ಮರ್ಷಿ ರಾಜು ಗುರು ಸ್ವಾಮೀಜಿ, ಹುಬ್ಬಳ್ಳಿಯ ಅಮ್ಮಾ ಆರೂಢ ಗುರುಪೀಠ ಯೋಗಾಶ್ರಮದ ಪೀಠಾಧಿಪತಿಗಳಾದ ರಾಘವೇಂದ್ರ ಗುರುಜೀ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಶಿವಾಜಿ ಡಿ.ಮಧೂರಕರ ಅವರು ಅಧ್ಯಕ್ಷತೆ ವಹಿಸಿದ್ದರು. ದಶರಥ ಎಮ್. ವಾಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ರವೀಂದ್ರಶೆಟ್ಟಿ ಉಳಿದೊಟ್ಟು, ಪ್ರಕಾಶ ಎಂ., ಪ್ರತಾಪ್ ಕುಮಾರ ಜೋಗಿ, ಹುಲ್ಲಪ್ಪ ಅಪ್ಪಣ್ಣ ಜಾಡರ, ಶ್ರೀನಿವಾಸ ಕಟ್ಟಿಮನಿ, ನಾಗರಾಜ ಗಬ್ಬೂರ, ಹರೀಶ ಜಂಗ್ಲಿ, ಕಿರಣ ಕೆ.ಗುರು, ಅಶೋಕ ಕಟ್ಟಿಮನಿ, ಕಿಶನ್ ಬಿಲಾನಾ, ಗೀತಾ ಮುದ್ದಿ, ಪ್ರೇಮಾ ಕಟ್ಟಿಮನಿ, ಮೂಕಾಂಬಿಕಾ ದಾಸ ವಿವಿಧ ಸಂಘಗಳ ಪದಾಧಿಕಾರಿಗಳು, ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 