ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಬೇಕು; ರವಿರಾಜ ಅಂಕೋಲೆಕರ್

ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಬೇಕು; ರವಿರಾಜ ಅಂಕೋಲೆಕರ್

ಕಾರವಾರ 08: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷ ರವಿರಾಜ ಉದ್ಘಾಟಿಸಿದರು .ಕಾರವಾರ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಮೂಲಕ ಅವರ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್ ಹೇಳಿದರು.ಅವರು ಶುಕ್ರವಾರ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳು ಚಿಕ್ಕವರಾಗಿದ್ದ ಸಂದರ್ಭದಲ್ಲಿಯೇ ಪೋಷಕರು ಮತ್ತು ಶಿಕ್ಷಕಕರು ಅವರಲ್ಲಿನ ಪ್ರತಿಭೆಯನ್ನು ಗುರುತಿಸುವ ಮೂಲಕ ಅವರಲ್ಲಿನ ಕೌಶಲ್ಯ ಮತ್ತು ಅಭಿರುಚಿಗೆ ತಕ್ಕಂತೆ ವೇದಿಕೆ ಕಲ್ಪಿಸಿದಲ್ಲಿ , ಅವರು ಮುಂದಿನ ದಿನಗಳಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವ್ಯಕ್ತಿಗಳಾಗಿ ಹೊರಹೊಮ್ಮುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಲಿದ್ದಾರೆ ಎಂದರು.ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಆಡಳಿತ) ನಾಗೇಶ ರಾಯ್ಕರ್ ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸಿಕ್ಕ ಅವಕಾಶವನ್ನು ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವಂತೆ ಹಾರೈಸಿದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಹಿರಿಯ ಸಹಾಯಕ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ,ನಿರ್ಣಾಯಕರಾದ ಕೆ ಜಾನ್ ಬೆಲ್, ಅನೀಲ್ ಮಡಿವಾಳ ವಿನುತಾ ಪಡ್ನೇಕರ, ಕೃಷ್ಣಾನಂದ ಗುರವ ಮತ್ತಿತರರು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಗಿರಿಜಾ ವೈದ್ಯ ಪ್ರಾರ್ಥಿಸಿದರು. ಕಲ್ಪನಾ ರಶ್ಮಿ ಕಲಾಲೋಕ ನೃತ್ಯ ಶಾಲೆಯ ಸೂರ್ಯಪ್ರಕಾಶ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.