ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತಿರಿಗೆ ಸನ್ಮಾನ
Talented students awarded Pratibha Award, retirees honored
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತಿರಿಗೆ ಸನ್ಮಾನ
ಗದಗ 27: ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 85ಅ ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ, ನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಇಲಾಖೆಗಳಿಗೆ ನಿವೃತ್ತಿ ಹೊಂದಿದವರಿಗೆ ಮತ್ತು ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಸಮಾರಂಭ ನಗರ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಜೂನ್ 29 ರಂದು ನಡೆಯಲಿದೆ ಎಂದು ಪಂಚಮಸಾಲಿ ಸಮಾಜ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಗೌರವಿಸುವುದರಿಂದ ಪ್ರೇರಣೆ ಹೆಚ್ಚಾಗುತ್ತದೆ. ಕಲಿಕೆಯ ಮೇಲೆ ಹೆಚ್ಚು ಆಸಕ್ತಿ ಹೆಚ್ಚುತ್ತದೆ. ಜಗದ್ಗುರು ಬಸವಜಯ ಮೃತುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಸಿ. ಪಾಟೀಲ, ಶಾಸಕ ರಾಜು ಕಾಗೆ, ಮಾಜಿ ಶಾಸಕ ಕಳಕಪ್ಪ ಬಂಡಿ ಕಾರ್ಯಕ್ರಮದಲ್ಲಿ ಭಾಗವಹಿಸುವವರು. ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಅಧ್ಯಕ್ಷತೆ ವಹಿಸುವರು. ವಿಜಯ ಕುಮಾರ್ ಗಡ್ಡಿ, ಡಾ.ಬಸನಗೌಡ ಪಾಟೀಲ, ಡಾ.ಸಂಗಮೇಶ ಕೋಳ್ಳಿಯವರ, ಉಮೇಶಗೌಡ ಪಾಟೀಲ, ಶಾಂತಪ್ಪ ಮುಳವಾಡ,ಸುನೀಲ ಮಹಾಂತಶೆಟ್ಟರ, ನಿಂಗಪ್ಪ ಪಿರೋಜಿ, ಆರಿ್ವ. ಗೊಪಾನಾಳ, ಸಿದ್ದಣ್ಣ ಬಂಡಿ, ಮಲ್ಲಿಕಾರ್ಜುನ ಹಿರೇಕೊಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಪಂಚಮಸಾಲಿ ಸಮಾಜದ ಯುವ ಘಟಕದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. 200ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದು, 20 ಕ್ಕೂ ಹೆಚ್ಚು ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ಮತ್ತು ಸರಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ನಿಂಗಪ್ಪ ಹುಗ್ಗಿ, ಎಸ್. ವ್ಹಿ ಜೀವನಗೌಡ್ರ, ಮಾಂತೇಶ ಕೆ. ನೆಲವಡಿ, ಬಸವರಾಜ ಗಡ್ಡೆಪ್ಪನವರ, ಮಂಜುನಾಥ ಗುಡದೂರು, ಶರಣಪ್ಪ ಗೋಳಗೊಳಕಿ, ಬಸವರಾಜ ಅನಗವಾಡಿ, ರಮೇಶ್ ರೋಣದ, ಸಂಗಮೇಶ್ ಗೊಂದಿ, ಚೇತನ್ ಅಬ್ಬಿಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 