ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
Taluk Level Guarantee Scheme Implementation Committee Meeting
ತಿಕೋಟಾ 29: ದಿ. 29ರಂದು ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಿತು. ಸದರಿ ಸಭೆಯಲ್ಲಿ ತಿಕೋಟಾ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷರಾದ ಗುರುಪಾದಗೌಡ ಸಿದ್ದನಗೌಡ ದಾಶ್ಯಾಳ ರವರು ಮಾತನಾಡಿ, ಸ್ವಾತಂತ್ರ್ಯಾ ನಂತರ ಬಂದಿರುವ ಸರ್ಕಾರಗಳು ಸಂವಿಧಾನದ ರಕ್ಷಣೆಯ ಜೊತೆಗೆ ಪ್ರಜಾ ಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಯಶಸ್ವಿಯಾಗಿರುತ್ತವೆ. ಅದರ ಮುಂದುವರೆದ ಭಾಗವಾಗಿ ಸಾರ್ವಜನಿಕರ ಸರ್ವತೋಮುಖ ಅಭಿವೃದ್ಧಿಗಾಗಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಘನ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಘನ ಸರ್ಕಾರವು ಜಾರಗೊಳಿಸಿದ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ಜನತೆಯ ತಲಾ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಪ್ರಥಮ ಸ್ಥಾನ ಪಡೆಯಲು ಗ್ಯಾರಂಟಿ ಯೋಜನೆಗಳ ಇಲಾಖೆಗಳ ಅಧಿಕಾರಿಗಳು ಸಾಮಾಜಿಕ ಕಳಕಳಿಯನ್ನು ಹೊಂದಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿರುವುದರಿಂದ ಅತ್ಯುತ್ತಮ ಸಾಧನೆಗೈಯ್ಯಲು ಸಾಧ್ಯವಾಗಿದೆ ಎಂದು ತಿಳಿಸಿದರು.
ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಂ. ಬಿ. ಪಾಟೀಲರವರ ದೂರದೃಷ್ಠಿ ಯೋಜನೆಗಳಿಂದಾಗಿ ಉದಾಹರಣೆಗೆ: ಸಮಗ್ರ ನೀರಾವರಿ, ಅತ್ಯುತ್ತಮ ಸಾರಿಗೆ ಸೌಲಭ್ಯ, ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ಉತ್ತಮ ದರ್ಜೆಯ ಶಾಲಾ/ಕಾಲೆಜುಗಳ ಕಟ್ಟಡಗಳನ್ನು ನಿರ್ಮಾಣ, ರೈತರಿಗಾಗಿ ತಡೆರಹಿತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ಅತೀ ಹೆಚ್ಚು ಸ್ಟೇಷನ್ ಗಳ ನಿರ್ಮಾಣ, ನಿರುದ್ಯೋಗಿಗಳಿಗೆ ಉದ್ಯೋಗವನ್ನು ಒದಗಿಸುವ ಸಲುವಾಗಿ ಕೈಗಾರಿಕಾ ಕ್ಷೇತ್ರವನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸುತ್ತಾ ರಾಜ್ಯದ ಆರ್ಥಿಕ ಪ್ರಗತಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತ್ರಾಯಗೌಡ ಬಿರಾದಾರ, ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಿತಿಯ ಸದಸ್ಯರಾದ ಸಂಜು ಆಯತವಾಡ, ಗಂಗೂಬಾಯಿ ಮಡದಾನ, ಗೈಬಿಲಾಲ ಮುಜಾವರ, ಕೋಟ್ಯಾಳ ಗ್ರಾ. ಪಂ. ಅಧ್ಯಕ್ಷರಾದ, ಶೋಭಾ ಲಕ್ಷಣ ಖೈರಾವ, ಊರಿನ ಗಣ್ಯರು ಭೀಮನಗೌಡ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಸಿ ಮ್ಯಾಗೇರಿ, ಆಹಾರ ನೀರೀಕ್ಷಕರಾದ ಎಮ್. ಎ ಅಕ್ಕಲಕೋಟ, ಕೆ.ಎಸ್.ಆರಿ್ಟ.ಸಿ ಘಟಕ ವ್ಯವಸ್ಥಾಪಕರಾದ ಎಸ್. ಎಲ್ ಚವ್ಹಾಣ, ತಾಲೂಕಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಮಹಾದೇವಿ ಸಿಂಗಾಡೆ, ಹೆಸ್ಕಾಂ ಇಲಾಖೆಯ ಸಹಾಯಕ ಅಭಿಯಂತರ ಎಸ್. ಕೆ ತೊರವಿ, ಕೋಟ್ಯಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಕಾರಿಗಳಾದ ಸುರೇಶ ದೊಡಮನಿ, ತಾ.ಪಂ. ಪ್ರಥಮ ದರ್ಜೆಯ ಸಹಾಯಕರಾದ ರೀತಾ ಮೌರ್ಯ, ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಊರಿನ ಗಣ್ಯರು, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಯವರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 