ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

Taluk Level Panch Guarantee Schemes Progress Review Meeting

  ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ 

ಗದಗ    10:  ಸರ್ಕಾರದಿಂದ ಅನುಷ್ಟಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಬೇಕು. ಒಂದು ವೇಳೆ ಯೋಜನೆಗಳ ಸೌಲಭ್ಯದ ದುರುಪಯೋಗವಾಗದಂತೆ ನಿಗಾ ವಹಿಸಿ ಎಂದು ತಾಲೂಕು ಮಟ್ಟದ  ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಜರುಗಿದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆಯ ಸಮರ​‍್ಕ ಅನುಷ್ಟಾನಕ್ಕಾಗಿ ಆಹಾರ ಇಲಾಖೆಯ ಅಧಿಕಾರಿಗಳು ಪಡಿತರ ಅಂಗಡಿದಾರರ ಜೊತೆಗೆ ಸಭೆ ನಡೆಸಬೇಕು. ಅನ್ನಭಾಗ್ಯದ ಅಕ್ಕಿಯು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ವೃಥಾ ಅಕ್ಕಿಯು ಪೋಲಾಗದಂತೆ ಜಾಗೃತೆ ವಹಿಸಬೇಕು. ನಗರದಲ್ಲಿನ ಬೀದಿ ದೀಪಗಳ ಕಂಬದ ದುರಸ್ತಿಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಜನನಿಬಿಡ ಪ್ರದೇಶಗಳಲ್ಲಿ ವಿದ್ಯುತ್ ಅವಘಡಗಳಾಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಇಲಾಖೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯ ಪ್ರಗತಿಯ ಕುರಿತು ನಿಖರ ಮಾಹಿತಿ ಒದಗಿಸಬೇಕು. ಗೃಹ ಲಕ್ಷ್ಮೀ  ಹಾಗೂ ಯುವ ನಿಧಿ ಯೋಜನೆಯ ಕುರಿತು ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕು.  ನಗರದ ಹಳೇ ಬಸ್ ಸ್ಟ್ಯಾಂಡ್ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ  ಸ್ವಚ್ಛತೆಗೆ ಕ್ರಮ ವಹಿಸಬೇಕು.  ನಗರದ ವಿವಿಧ ಪ್ರದೆಶಗಳಿಂದ  ಜಿಮ್ಸ್‌ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದು ಹೆಚ್ಚಿನ ಬಸ್‌ಗಳನ್ನು ಕಲ್ಪಿಸಲು ಕೆಎಸ್‌ಆರ್ ಟಿಸಿಯವರು  ಮೇಲಾಧಿಕಾರಿಗಳಿಗೆ  ಪ್ರಸ್ತಾವನೆ ಸಲ್ಲಿಸಬೇಕು. ಇನ್ನೂ ಬೇಕಾಗಿರುವ ಬಸ್ ಗಳ ಸಂಖ್ಯೆ ಹಾಗೂ ಸಿಬ್ಬಂದಿಗಳ ಸಂಖ್ಯೆಗಳ ಕುರಿತು ಮಾಹಿತಿ ಒದಗಿಸಬೇಕೆಂದು  ಅಶೋಕ ಮಂದಾಲಿ ತಿಳಿಸಿದರು.ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್ ಪಾಟೀಲ ಅವರು ಮಾತನಾಡಿ ಗೃಹಲಕ್ಷ್ಮೀ ಯೋಜನೆಯ  ಸಮರ​‍್ಕ ಅನುಷ್ಟಾನಕ್ಕಾಗಿ   ಅಂಗನವಾಡಿ  ಮೇಲ್ವಿಚಾರಕಿಯರು ( ಸುಪರ್ ವೈಸರ್ ) ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಭೆ ಕರೆದು  ಸರ್ವೆ ಕಾರ್ಯ ಚುರುಕುಗೊಳಿಸಬೇಕೆಂದು ತಿಳಿಸಿದರು. ಪಂಚಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.  ಗೃಹಲಕ್ಷ್ಮೀ ಯೋಜನೆಯಡಿ ಡಿಸೆಂಬರ್ 2024 ರವರೆಗೆ  ಗದಗ ತಾಲೂಕಿನಲ್ಲಿ  77823  ನೋಂದಣಿಯಾದ ಅರ್ಜಿಗಳ ಪೈಕಿ 76521 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. 76521  ಫಲಾನುಭವಿಗಳಿಗೆ   ಡಿಬಿಡಿ ಮೂಲಕ ಹಣ ಪಾವತಿಸಲಾಗಿದೆ. ಶೇಕಡ 99.66 ಪ್ರಗತಿ ಸಾಧಿಸಿದೆ. ಜಿಲ್ಲೆಯಲ್ಲಿ ವಾಕರಸಾಸಂಸ್ಥೆಯಿಂದ ಗದಗ ಘಟಕದಲ್ಲಿ 11-6-2023 ರಿಂದ 05-03-2025 ರವರೆಗೆ 12578976 ಪುರುಷ ಪ್ರಯಾಣಿಕರು ಹಾಗೂ 17681952 ಮಹಿಳಾ ಪ್ರಯಾಣಿಕರು  ಸೇರಿದಂತೆ ಒಟ್ಟಾರೆ  30260928  ಪ್ರಯಾಣಿಕರು  ಪ್ರಯಾಣಿಸಿದ್ದಾರೆ.  ಶಕ್ತಿ ಯೋಜನೆಯಡಿ ಗದಗ ಘಟಕದಲ್ಲಿ 5193.21 ಲಕ್ಷ ರೂ.  ಮಹಿಳಾ ಪ್ರಯಾಣಿಕರ ಆದಾಯವಾಗಿದೆ. ಬೆಟಗೇರಿ ಘಟಕದಲ್ಲಿ 3149.11 ಲಕ್ಷ ಮಹಿಳಾ ಪ್ರಯಾಣಿಕರ ಆದಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿ ಗದಗ ತಾಲೂಕಿನಲ್ಲಿ ನವೆಂಬರ್  2024 ರ ಮಾಹೆಯಲ್ಲಿ  ಗದಗ ಪಡಿತರ ಪ್ರದೇಶದಲ್ಲಿ  24,428 ಬಿಪಿಎಲ್  ಕಾರ್ಡುದಾರರಿಗೆ ಹಾಗೂ 46,057  ಬಿಪಿಎಲ್  ಕಾರ್ಡುದಾರರಿಗೆ   74,485 ಡಿ.ಬಿ.ಟಿ.ಮೂಲಕ ಹಣ ಸಂದಾಯ ಮಾಡಿದೆ.  ಫಲಾನುಭವಿಗಳಿಗೆ 4,02,27,440  ರೂ.ಗಳನ್ನು  ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ.   ಗೃಹಜ್ಯೋತಿ ಯೋಜನೆಯಡಿ 28-2-2025 ರವರೆಗೆ ಗದಗ ಗ್ರಾಮೀಣ ಉಪವಿಭಾಗದಲ್ಲಿ 53268  ಸ್ಥಾವರಗಳು ಅರ್ಹವಿದ್ದು  52909 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.33 ರಷ್ಟು ಪ್ರಗತಿಯಾಗಿದೆ. ಗದಗ ಶಹರ ಉಪವಿಭಾಗದಲ್ಲಿ 46483  ಸ್ಥಾವರಗಳು ಅರ್ಹವಾಗಿದ್ದು 46235 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.47 ಪ್ರಗತಿಯಾಗಿದೆ.  ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ ಜನೆವರಿ 2025 ರವರೆಗೆ  1704 ಫಲಾನುಭವಿಗಳ ನೋಂದಣಿಯಾಗಿದ್ದು  826  ಅರ್ಹ ಫಲಾನುಭವಿಗಳಿಗೆ   ಡಿಬಿಟಿ ಮೂಲಕ  24,57,000 ರೂ.   ವರ್ಗಾವಣೆಯಾಗಿರುತ್ತದೆ ಎಂದು ಸಂಬಂಧಿತ ಅಧಿಕಾರಿಗಳು  ಮಾಹಿತಿ ಒದಗಿಸಿದರು. ಸಭೆಯಲ್ಲಿ  ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು ಕಾಳೆ,   ಮೀನಾಕ್ಷಿ ಬೆನಕಣ್ಣವರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್ , ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ,  ಸಾವಿತ್ರಿ ಹೂಗಾರ, ಶರೀಫ್, ತಾಲೂಕು ಪಂಚಾಯತ್ ಮ್ಯಾನೇಜರ್ ರುದ್ರ​‍್ಪ ಬಾವಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನಿತ ಅಧಿಕಾರಿಗಳು ಹಾಜರಿದ್ದರು.