ತಾಲೂಕಾ ಮಟ್ಟದ ಕಾಲೇಜ್ ವಿದ್ಯಾರ್ಥಿಗಳ ಸ್ಪರ್ಧೆ
Taluka level college student competition
ನೇಸರಗಿ 17: 2025 -26 ನೇ ಸಾಲಿನ ಬೈಲಹೊಂಗಲ ಹಾಗೂ ಚ.ಕಿತ್ತೂರು ತಾಲೂಕ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತಿಕ ಚಟುವಟಿಗಳ ಸ್ಪರ್ಧೆಗಳು, ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಗ್ರಾಮದ ಪಿಯು ಕಾಲೇಜು ಆವರಣದಲ್ಲಿ ಜರುಗಿದವು. ಆರಂಭದಲ್ಲಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನವರಿಗೆ ಶ್ರದಾಂಜಲಿ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಮಾರಂಭದಲ್ಲಿ ವಿವಿಧ ಕಾಲೇಜು ಗಳಿಂದ ಆಗಮಿಸಿದ ಅನೇಕ ಸ್ಪರ್ಧಾಳುಗಳು ಭಾಗವಹಿಸಿದ್ದರು ಹಾಗೂ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ವೇದಿಕೆಯ ಮೇಲೆ ಪ್ರಾಂಶುಪಾಲರಾದ ಎಸ್ ವ್ಹಿ ದೊಡಮನಿ, ಕಾಲೇಜು ಸುಧಾರಣಾ ಸಮಿತಿ ಉಪಾಧ್ಯಕ್ಷರಾದ, ಶ ಬಸವರಾಜ ಚಿಕ್ಕನಗೌಡ್ರ, ಯುವ ಧುರಿಣರಾದ ಸಚಿನ್ ಪಾಟೀಲ್, ಹಿರಿಯ ಉಪನ್ಯಾಸಕರಾದ ಪುರಾಣಿಕಮಠ, ಎಸ್ . ಆರ್. ಕಲಹಾಳ,ಶಿಕ್ಷಕರಾದ ಸಂತೋಷ ಪಾಟೀಲ ಹಾಗೂ ಅಃಅ ಯ ಸದಸ್ಯರು, ಉಪನ್ಯಾಸಕರು, ಉಪಸ್ಥಿತರಿದ್ದರು. ಗಣ್ಯಮಾನ್ಯರು, ಅಥಿತಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಸಿ.ಬಿ. ರೊಟ್ಟಿ ನಿರೂಪಿಸಿದರೆ, ಕನ್ನಡ ಉಪನ್ಯಾಸಕಾರದ ಡಾ. ಎನ್. ಎಸ್. ವಾಲಿಕಾರ ಎಲ್ಲರನ್ನು ವಂದಿಸಿದರು. ಸಂಜೆ ಸಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 