ಶಿಕ್ಷಕ ಗಾದಿ ನಿಂಗಪ್ಪ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ
Teacher Gadi Ningappa is the district level best teacher awardee
ಕಂಪ್ಲಿ 27 :ಬಳ್ಳಾರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಗಾದಿ ನಿಂಗಪ್ಪ(ನಿಂಗರಾಜ ಎಸ್.ಕೆ) ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.ಇಲ್ಲಿನ ಗಾದಿ ನಿಂಗಪ್ಪ ವನಿತಾ ದಂಪತಿಗೆ ಪ್ರಶಸ್ತಿ ನೀಡುವ ಮೂಲಕ ಸತ್ಕರಿಸಿ ಸನ್ಮಾನಿಸಲಾಯಿತು. ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಶಿವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗಾದಿ ನಿಂಗಪ್ಪ ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿ, 2016ರಿಂದ ಮೆಟ್ರಿ ಶಿವಪುರ ಸ.ಹಿ.ಪ್ರಾ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ನನ್ನನ್ನು ಹುಡುಕಿಕೊಂಡು ಬಂದಿರುವುದು ಸಂತಸ ತಂದಿದೆ. ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ಸಹ ಶಿಕ್ಷಕ ಗಾದಿ ನಿಂಗಪ್ಪ ಅವರ ನಿಸ್ವಾರ್ಥ ಸೇವೆ ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದು ನಮಗೆಲ್ಲಾ ಹರ್ಷ ತಂದಿದೆ. ಇವರ ಕರ್ತವ್ಯ ನಿಷ್ಟ ಸೇವೆ, ಸಾಮಾಜಿಕ ಕಳಕಳಿ, ಮಕ್ಕಳ ಬಗ್ಗೆ ವಿಶೇಷ ಕಾಳಜಿ, ಹೀಗೆ ಅವರ ಸೇವೆಗೆ ಸಂದ ಗೌರವ ಇದಾಗಿದೆ ಎಂದು ಹೇಳಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸುನಿತಾ, ಜಿಪಿಟಿಸಿ ಸಂಘದ ಅಧ್ಯಕ್ಷ ಮಂಜುನಾಥ, ಸಿಆರ್ಿ ಕರುಣಾಕರ, ಮುಖ್ಯಗುರು ವಿಶ್ವನಾಥ, ಸಹೋದರಾದ ಬಸವರಾಜ ನೆಲಜೇರಿ, ಸಿದ್ದಪ್ಪ ಗಂಗಾವತಿ, ಸಹ ಶಿಕ್ಷಕರಾದ ಪಂಪನಗೌಡ, ಇಮಾಮ್ ಸಾಬ್, ಗಂಗಮ್ಮ, ಸುನಿತಾ, ರಾಜೇಶ್ವರಿ, ರಾಜನಾಯಕ, ಬಸವರಾಜ, ಶಿವಕುಮಾರ, ಆಂಜನೇಯ್ಯ, ರಾಮಚಂದ್ರ್ಪ, ಮಡಿವಾಳಪ್ಪ ಸೇರಿದಂತೆ ಇತರರು ಅಭಿನಂದಿಸುವ ಜೊತೆಗೆ ಹರ್ಷ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 