ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರ ರಿಫ್ರೆಶರ್ -5 ತರಬೇತಿ
Teacher Professional Development Workshop Refresher-5 Training
ಬೆಳಗಾವಿ 20: ನಗರದಲ್ಲಿ ಬುಧವಾರ ದಿ. 19 ರಂದು ಈಫಾ ಹೋಟೆಲ್‌ನಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ನೀತಿ ಆಯೋಗ ಮತ್ತು ಶೆಲ್ ಇಂಡಿಯಾ ಸಹಯೋಗದಲ್ಲಿ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರದ ರಿಫ್ರೆಶರ್ -5 ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಹಾರೂಗೇರಿಯ ಸೆಂಟ್ ಪೀಟರ್ಸ್ ಪ್ರಾಂಶುಪಾಲ ಗುಲ್ತಾಜ್‌ಖಾನ್ ಇವರು ತರಬೇತಿಯನ್ನು ಉದ್ದೇಶಿಸಿ ಮಾತನಾಡಿ ಮುಂದಿನ ಪೀಳಿಗೆಯ ನಾಯಕರನ್ನು ಪ್ರೇರೇಪಿಸಲು ಸೆಲ್ ನೆಕ್ಷ್ಲೋರರ್ಸ ಶಿಕ್ಷಕರನ್ನು ಸಜ್ಜುಗೊಳಿಸುತ್ತಿದೆ, ಈ ಒಂದು ಶೈಕ್ಷಣಿಕ ಕಾರ್ಯಕ್ರಮ ಶಿಕ್ಷಕರನ್ನು ಪ್ರೇರೇಪಿಸುವಲ್ಲಿ ಯಶಸ್ವಿಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಕಾರ್ಯಗತಗೊಳಿಸುತ್ತಿರುವ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ ತರಬೇತಿಯಲ್ಲಿ ಅಳವಡಿಸಿಕೊಳ್ಳಲಾದ ನವೀನ ಚಟುವಟಿಕೆಗಳು, ಉಪಕರಣಗಳು ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್‌ನ ಕಾರ್ಯವೈಖರಿಯನ್ನು ಹೊಗಳಿದರು. ಯುವ ಮನಸ್ಸುಗಳನ್ನು ಪೋಷಿಸುವ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ 16 ಶಾಲೆಗಳಿಂದ 24 ಎ.ಟಿ.ಎಲ್ ಶಿಕ್ಷಕರು ಹಾಗೂ 3 ಪ್ರಾಂಶುಪಾಲರು ಉತ್ಸಾಹದಿಂದ ಹಾಜರಾಗಿ ತರಬೇತಿಯ ಸಂಪೂರ್ಣ ಲಾಭವನ್ನು ಪಡೆದರು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 