ಶಿಕ್ಷಕಿ ರೇವಕ್ಕ ಹತ್ತಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ
Teacher Revakka Kati presented with the district-level best teacher award
ಶಿಕ್ಷಕಿ ರೇವಕ್ಕ ಹತ್ತಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ
ಬೆಳಗಾವಿ 10: ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಮಾದರಿ ಮರಾಠಿ ಶಾಲೆಯ ಕನ್ನಡ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರೇವಕ್ಕ ಗಂಗಪ್ಪ ಹತ್ತಿ ಇವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಳಗಾವಿಯ ಕುಮಾರ ಗಂಧರ್ವ ಸಭಾಭವನದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯನ್ನು ರೇವಕ್ಕ ಗಂಗಪ್ಪ ಹತ್ತಿ ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ರೇವಕ್ಕ ಹಕ್ಕಿಯವರು ಮರಾಠಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಳೆದ 25 ವರ್ಷಗಳಿಂದ ಕನ್ನಡ ನಾಡು ನುಡಿ, ಸಂಸ್ಕೃತಿಯ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ಕನ್ನಡವನ್ನು ಜಾಗೃತಗೊಳಿಸಿ ಗಡಿ ಭಾಗದ ಶಾಲೆಯಲ್ಲಿ ಕನ್ನಡವನ್ನು ಬೆಳೆಸುವಲ್ಲಿ ಶ್ರಮಿಸಿದ್ದಾರೆ. ಅವರ ಸುದೀರ್ಘ ಕ್ರೀಯಾಶೀಲ ಸೇವೆ ಪರಿಗಣಿಸಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿದೆ. ಶಿಕ್ಷಕಿ ರೇವಕ್ಕ ಅವರಿಗೆ ಶಾಲಾ ಶಿಕ್ಷಕರು, ಇಲಾಖೆಯ ಅಧಿಕಾರಿಗಳು ಅಭಿನಂದನೆ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 