ಶಿಕ್ಷಕಿ ಸುಜಾತಾಗೆ ಕ್ರಿಯಾಶೀಲ ಶಿಕ್ಷಕಿ ಪುರಸ್ಕಾರ
Teacher Sujatha receives Active Teacher Award
ಶಿಕ್ಷಕಿ ಸುಜಾತಾಗೆ ಕ್ರಿಯಾಶೀಲ ಶಿಕ್ಷಕಿ ಪುರಸ್ಕಾರ
ಹುಕ್ಕೇರಿ, 11 : ತಾಲೂಕಿನ ಹಂಚಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರಿಗೆ ಕ್ರಿಯಾಶೀಲ ಶಿಕ್ಷಕಿ ಪ್ರದಾನ ಮಾಡಲಾಯಿತು.
ಪಟ್ಟಣದಲ್ಲಿ ರವಿವಾರ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಮಠಾಧೀಶರು, ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಸುಜಾತಾ ನಾವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರು ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಈ ಪುರಸ್ಕಾರ ಕೊಡಮಾಡಿದೆ.
ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಶಿವಬಸವ ಸ್ವಾಮೀಜಿ, ಕ್ಯಾರಗುಡ್ಡ ಅವುಜೀಕರ ಧ್ಯಾನಯೋಗಾಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ, ಯುವ ಮುಖಂಡ ಪೃಥ್ವಿ ಕತ್ತಿ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ಸದಸ್ಯ ಮಹಾವೀರ ನಿಲಜಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ, ಬಿಇಒ ಪ್ರಭಾವತಿ ಪಾಟೀಲ, ಬಿಆರಿ್ಸ ಎ.ಎಸ್.ಪದ್ಮಣ್ಣವರ, ಬಿಸಿಯೂಟ ಯೋಜನೆ ಸಹಾಯಕಿ ನಿರ್ದೇಶಕಿ ಸವಿತಾ ಹಲಕಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 