ಶಿಕ್ಷಕರ ದಿನಾಚರಣೆ: ಡಾ, ರಾಧಾಕೃಷ್ಣನ್ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ

ಶಿಕ್ಷಕರ ದಿನಾಚರಣೆ: ಡಾ, ರಾಧಾಕೃಷ್ಣನ್ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ Teachers' Day: Implement Dr. Radhakrishnan's ideals in your life

ಶಿಕ್ಷಕರ ದಿನಾಚರಣೆ: ಡಾ, ರಾಧಾಕೃಷ್ಣನ್ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ 

ಕೊಪ್ಪಳ  10, ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ವತಿಯಿಂದ ನಗರದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿ ನಡೆಯುತ್ತಿರುವ ಮಿಲ್ಲತ್ ಪಬ್ಲಿಕ್ ಶಾಲೆಯಲ್ಲಿ ಬುಧವಾರದಂದು ಶಿಕ್ಷಕರ ದಿನಾಚರಣೆ ಯಶಸ್ವಿಯಾಗಿ ಜರುಗಿತು, ಡಾ, ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಗೌರವ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಸೈಯದ್ ಗೌಸ್ ಪಾಶಾ ಖಾಜಿ ರವರು ಮಾತನಾಡಿ ಸರ್ವಪಲ್ಲಿ ಡಾ, ರಾಧಾಕೃಷ್ಣನ್ ರವರ ಆದರ್ಶಗಳನ್ನು ಪ್ರತಿಯೊಬ್ಬರು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಿರಿಯ ಪತ್ರಕರ್ತ ಹಾಗೂ ಸಂಸ್ಥೆಯ ಮುಖ್ಯ ಸಲಹೆಗಾರ ಎಂ ಸಾಧಿಕ್ ಅಲಿ ಮಾತನಾಡಿ ಇಂದಿನ ಮಕ್ಕಳೆ ಈ ನಾಡಿನ ಭಾವಿ ಪ್ರಜೆಗಳಾ ಗಿದ್ದು ಅವರ ಭವಿಷ್ಯ ಉಜ್ವಲ ಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಹೇಳಿದರು, ಸಂಸ್ಥೆಯ ಆಡಳಿತ ಮಂಡಳಿ ಕಾರ್ಯನಿರ್ವಾಹಕ ಸಂಚಾಲಕ ಸೈಯದ್ ಇಮಾಮ ಹುಸೇನ್ ಸಿಂದೋಗಿ ರವರು ಮಾತನಾಡಿ ಶಿಕ್ಷಕರ ಮೇಲಿನ ಜವಾಬ್ದಾರಿ ಮಹತ್ವದ್ದಾಗಿದೆ ,ಉತ್ತಮ ಸಮಾಜ ನಿರ್ಮಾಣ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಹೇಳಿದರು, ವೇದಿಕೆ ಮೇಲೆ ಸಂಸ್ಥೆಯ ಆಡಳಿತ ಮಂಡಳಿ ಇನ್ನೋರ್ವ ಕಾರ್ಯ ನಿರ್ವಾಹಕ ಸಂಚಾಲಕ ಅಬ್ದುಲ್ ಅಜೀಜ್ ಮಾನ್ವಿ ಕರ್ ಉಪಸ್ಥಿತರಿದ್ದು ,ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯ ಕ್ರಮ ನಿರೂಪಿಸಿ ಆರಂಭದಲ್ಲಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು, ಇದೆ ವೇಳೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಹ ಶಿಕ್ಷಕರು ಗಳಾದ ನಾಜಿಯಾ ಬೇಗಂ, ಜೈಬಾ, ಹೀನಾ, ಅಫಿಫಾ , ರುಕ್ಸಾರ್, ಶಾಹಿದಾ, ಫಾತಿಮಾ ಮತ್ತು ಲಕ್ಷ್ಮಿ ರವರಿಗೆ ಆಡಳಿತ ಮಂಡಳಿ ಪರವಾಗಿ ನೆನಪಿನ ಕಾಣಿಕೆ ನೀಡಿ ಸತ್ಕರಿಸಲಾಯಿತು,