ಶಿಕ್ಷಕರ ಪಾತ್ರ ಮಹತ್ವದ್ದು: ನಾಗಣೆ

ಶಿಕ್ಷಕರ ಪಾತ್ರ ಮಹತ್ವದ್ದು: ನಾಗಣೆ  Teachers' role is significant: Nagane


ಇಂಡಿ 19: ಶ್ರೇಷ್ಠ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಠ್ಯ ವಿಷಯಗಳನ್ನು ಬೋಧಿಸುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸತ್ಯ, ಪ್ರಾಮಾಣಿಕತೆ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಾರೆ ಎಂದು ಝಳಕಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ನಾಗಣೆ ಹೇಳಿದರು. ಇಂಡಿ ತಾಲ್ಲೂಕಿನ ಝಳಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆ ಹಾಗೂ ಭಾರತೀಯ ಸುರಾಜ್ಯ ಸಂಸ್ಥೆ, ಕನ್ನೂರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿ ಬಿ.ಬಿ. ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಾಗೂ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಸುರಾಜ್ಯ ಸಂಸ್ಥೆಯ ವತಿಯಿಂದ ಶಾಲೆಯ ಶಿಕ್ಷಕರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳು ಗುರು ವಂದನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರಿಗೆ ಶುಭಾಶಯ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಭಾರತೀಯ ಸುರಾಜ್ಯ ಸಂಸ್ಥೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.