ಮಕ್ಕಳ ಪ್ರತಿಭೆಗಳನ್ನು ಹೊರತರುವ ಜವಾಬ್ದಾರಿ ಶಿಕ್ಷಕರದ್ದು: ಚೋಳನ್

ಧಾರವಾಡ 07:ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ, ಹೊರತರುವ ಮುಖ್ಯ ಹೊಣೆಗಾರಿಕೆ ಶಿಕ್ಷಕರು ಮತ್ತು ಪಾಲಕರದ್ದಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ  ಸಹಯೋಗದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ  ಕಲಾ ಉತ್ಸವ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸ್ಪಧರ್ೆಗಳ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. 

ಪಠ್ಯಪುಸ್ತಕದ ಜೊತೆಗೆ ವಿಭಿನ್ನ ಕಲೆಗಳಲ್ಲಿ ವಿದ್ಯಾಥರ್ಿಗಳು ಭಾಗವಹಿಸುವುದರಿಂದ ವಿದ್ಯಾಥರ್ಿಗಳಲ್ಲಿ ಅನೇಕ ಪ್ರತಿಭೆಗಳು ಹೊರಬರುತ್ತವೆ. ಆದ್ದರಿಂದ ಅವರ ಕಲೆ, ಜ್ಞಾನ, ಪ್ರತಿಭೆಗಳನ್ನು ಹೊರತರುವ ಪ್ರಯತ್ನ ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಗಜಾನನ ಮನ್ನಿಕೇರಿ ಮಾತನಾಡಿ, ಉತ್ತಮವಾದ ಕಲೆ, ಸ್ಪಧರ್ೆಗಳನ್ನು ಏರ್ಪಡಿಸಿ, ವಿದ್ಯಾಥರ್ಿಗಳಲ್ಲಿರುವ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮೂಲಕ ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಲ್ಸನ್ ಜಾಜರ್್, ಧರ್ಮದಶರ್ಿ ಜಿ.ಎಸ್. ಕುರಿ, ಶಶಿಕಲಾ ತುಮಕೂರು, ಬಷೀರ್ ಶೇಠ್ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಜಾನಪದ ನೃತ್ಯ, ದೃಶ್ಯ ಕಲೆ, ಮಿಮಿಕ್ರಿ, ನಾಟಕ, ಆಶುಭಾಷಣ, ಭಾಷಣ ರಂಗೋಲಿ ಸ್ಪಧರ್ೆ, ರಸಪ್ರಶ್ನೆ, ಚಿತ್ರಕಲೆ ಹೀಗೆ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ತಾಲೂಕು ಹಂತದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಮಕ್ಕಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ ಸ್ವಾಗತಿಸಿದರು. ಕೀತರ್ಿವತಿ ವಿ.ಎನ್. ನಿರೂಪಿಸಿದರು. ಎನ್.ಕೆ. ಸಾಹುಕಾರ್ ವಂದಿಸಿದರು.