ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಬಸವರೆಡ್ಡಿ

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಬಸವರೆಡ್ಡಿ Teachers are the architects who shape the future of students: Basava Reddy

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಬಸವರೆಡ್ಡಿ 

ದೇವರಹಿಪ್ಪರಗಿ 05: ಶಿಕ್ಷಕ ವೃತ್ತಿ ಶ್ರೇಷ್ಠ ಮಟ್ಟದ ಮತ್ತು ಗೌರವಾನ್ವಿತ ಸೇವಾ ವೃತ್ತಿಯಾಗಿದ್ದು, ಅವರು ಸಮಾಜದಲ್ಲಿ ವಿಶೇಷ ಸ್ಥಾನಮಾನವನ್ನು ಅಲಂಕರಿಸಿದ್ದಾರೆ. ಅವರ ತ್ಯಾಗ, ನಿಸ್ವಾರ್ಥ ಸೇವಾ ಮನೋಭಾವ, ಕರ್ತವ್ಯನಿಷ್ಠೆ ಮತ್ತು ಸಮಯಪ್ರಜ್ಞೆಯಿಂದ ಕೂಡಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಅಮೂಲ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್‌.ಎನ್‌. ಬಸವರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪಟ್ಟಣದ ತಾಳಿಕೋಟೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರದಂದು ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು,ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ, ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಧಾರೆಯೆರೆದು ಅವರ ಉಜ್ವಲ ಭವಿಷ್ಯ ಮತ್ತು ಶ್ರೇಷ್ಠ ಪ್ರಜೆಗಳನ್ನಾಗಿ ರೂಪಿಸುವ ಕಾರ್ಯ ಅಮೂಲ್ಯ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳು ಎಂದು ಅವರು ನುಡಿದರು. 

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಎನ್‌.ಬಿ.ಪಾಟೀಲ ಅವರು ಮಾತನಾಡಿ, ಶಿಕ್ಷಣ ಪ್ರೇಮಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ಬದುಕನ್ನು ಅರ್ಥೈಸಿಕೊಂಡು ಮಕ್ಕಳನ್ನು ಶ್ರೇಷ್ಠ ನಾಗರಿಕರನ್ನಾಗಿ ರೂಪಿಸುವಂತೆ ಶಿಕ್ಷಕರಿಗೆ ಸಲಹೆ ನೀಡಿದರು. ವಿದ್ಯಾರ್ಥಿಗಳೇ ಕಾರ್ಯಕ್ರಮವನ್ನು ರಚಿಸಿ, ರೂಪಿಸಿ, ಪ್ರದರ್ಶಿದ್ದು ವಿಶೇಷವಾಗಿತ್ತು.ಇದೇ ಸಂದರ್ಭದಲ್ಲಿ ಮುಖಂಡರಾದ ಹಸನಸಾಬ ಹರನಾಳ, ಶಿಕ್ಷಕರಾದ ಅಖಿಲ್ ನಾಗಾವಿ, ಗಾಯತ್ರಿ ಉಕ್ಕಲಿ,ಸೌಭಾಗ್ಯ ದೇಸಾಯಿ, ಜ್ಯೋತಿ ಬಾಗೇವಾಡಿ, ಅಶ್ವಿನಿ ಹೆಬ್ಬಾಳ, ಮಹಾಲಕ್ಷ್ಮಿ ಗೋಡಾಳ, ಅಶ್ವಿನಿ ನಾಗರಬೆಟ್ಪ , ಮಾಳು ಪೂಜಾರಿ ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.