ಮಕ್ಕಳ ಭವಿಷ್ಯ ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕು: ಶಿವಣ್ಣನವರ

Teachers should take initiative to build future of children: Shivannavara

ಮಕ್ಕಳ ಭವಿಷ್ಯ ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕು: ಶಿವಣ್ಣನವರ 

ಬ್ಯಾಡಗಿ 20: ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿಯದಂತೆ  ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿಸಿ ಅವರ ಭವಿಷ್ಯ ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಅವರು ತಾಲ್ಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಫ್ರೌಡ ಶಾಲೆಗಳಲ್ಲಿ ಎನ್‌ಆರ್‌ಇಜಿ ಯೋಜನೆಯಡಿ 20 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ  ಬಿಸಿಯೂಟ ಕಟ್ಟಡ ಕಾಮಗಾರಿಗೆ  ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಆದರ್ಶ ಪ್ರಜೆಗಳಾಗಲು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯಕವಾಗಿದೆ.ಸಂಸ್ಕಾರ ಇದ್ದರೇನೆ ವಿದ್ಯೆಗೆ ಬೆಲೆ ಬರುತ್ತದೆ. ಕಾರಣ, ಅಕ್ಷರ ಜ್ಞಾನದ ಜತೆಗೆ ಉತ್ತಮ ಸಂಸ್ಕಾರವನ್ನೂ ಕೊಡುವ ಕೆಲಸ ಆಗಬೇಕಿದೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಕೋಟಿ ಮಾತನಾಡಿ ಶಿಕ್ಷಕ ವೃತ್ತಿ ಬಹಳ ಪವಿತ್ರವಾಗಿದೆ. ಹೀಗಾಗಿ ಶಿಕ್ಷಕರು ವೃತ್ತಿ ಗೌರವ ಕಾಯ್ದುಕೊಂಡು ಹೋಗಬೇಕು. ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು.ಮಕ್ಕಳಿಗೆ ಬುನಾದಿ ಶಿಕ್ಷಣ ಮಾತೃಭಾಷೆಯಲ್ಲೇ ಕೊಡಬೇಕು. ಸಾಧಕರಲ್ಲಿ ಮಾತೃಭಾಷೆಯಲ್ಲಿ ಓದಿದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಪಠ್ಯಕ್ರಮದೊಂದಿಗೆ ಜೀವನ ಮೌಲ್ಯಗಳನ್ನೂ ಹೇಳಿಕೊಡಲಾಗುತ್ತಿದೆ. ಮಕ್ಕಳನ್ನು ಸ್ಪರ್ಧಾತ್ಮಕ ಯುಗದ ಸವಾಲುಗಳಿಗೆ   ಹೊಂದಿಕೊಳ್ಳುವಂತ ಶಿಕ್ಷಣವನ್ನು ನೀಡಬೇಕೆಂದರು.ಈ ಸಂದರ್ಭದಲ್ಲಿ ಗ್ರಾಂ.ಪಂ ಅಧ್ಯಕ್ಷ ವೀರನಗೌಡ ಪಾಟೀಲ, ಮಾರುತಿ ಅಚ್ಚಿಗೇರಿ, ಸುರೇಶಗೌಡ ಪಾಟೀಲ, ಮಹೇಶ ಗೌಡ ಪಾಟೀಲ, ಅಬ್ದುಲ್ ಮುನಾಫ್ ಎಲಿಗಾರ, ಗುತ್ತಿಗೆದಾರರಾದ ಗಣೇಶ ಚಿಕ್ಕಳ್ಳಿ, ಶಬ್ಬೀರ್ ಪಾಟೀಲ ಸೇರಿದಂತೆ ಇತರರಿದ್ದರು.