ದುಬೈ 24: ಆಗಸ್ಟ್ 1ರಿಂದ ಆರಂಭಗೊಳ್ಳಲಿರುವ ಭಾರತ-ಇಂಗ್ಲೆಂಡ್ ನಡುವಿನ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಐಸಿಸಿ ನೂತನ ಟೆಸ್ಟ್ ಯರ್ಾಂಕಿಂಗ್ ಪ್ರಕಟ ಮಾಡಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ನಿಷೇಧಿತ ಕ್ರಿಕೆಟಿಗ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದು, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಶ್ರೀಲಂಕಾದ ದಿಮುತ್ ಕರುಣಾರತ್ನೆ ಇದೇ ಮೊದಲ ಸಲ ಏಳನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇತ್ತ ಬೌಲಿಂಗ್ ವಿಭಾಗದಲ್ಲಿ ಇಂಗ್ಲೆಂಡ್ನ ಜೇಮ್ಸ್ ಆ್ಯಂಡರ್ಸನ್, ದಕ್ಷಿಣ ಆಫ್ರಿಕಾದ ಕಾಗಿಸೋ ರಬಾಡ ಹಾಗೂ ಭಾರತದ ರವೀಂದ್ರ ಜಡೇಜಾ ಮೊದಲ ಮೂರು ಸ್ಥಾನಗಳಲ್ಲಿ ಮುಂದುವರೆದಿದ್ದಾರೆ.
ಇಂಗ್ಲೆಂಡ್-ಭಾರತ ನಡುವಿನ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನಂಬರ್ 1ಸ್ಥಾನಕ್ಕೇರಲು ಅವಕಾಶ ಲಭ್ಯವಾಗಿದ್ದು, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ ನಂ.1 ಸ್ಥಾನಕ್ಕೆ ಲಗ್ಗೆಯಿಡಬಹುದಾಗಿದೆ. ಕೊಹ್ಲಿ ಆಸೀಸ್ ಕ್ರಿಕೆಟಿಗ ಸ್ಮಿತ್ಗಿಂತ 25 ಅಂಕ ಹಿಂದಿದ್ದಾರೆ. ಒಂದು ವೇಳೆ ಕೊಹ್ಲಿ ಉತ್ತಮ ಪ್ರದರ್ಶನ ತೋರಿದರೆ ನಂ.1 ಸ್ಥಾನಕ್ಕೇರಲು ಸುವಣರ್ಾವಕಾಶವಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಗಮನಾರ್ಹ ಪ್ರದರ್ಶನ ತೋರಿದ ಲಂಕಾದ ಕೆಲ ಆಟಗಾರರು ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. ಕರುಣಾರತ್ನೆ ಜತೆಗೆ ದಿನೇಶ್ ಚಾಂಡಿಮಲ್ ಕೂಡ ಒಂದು ಸ್ಥಾನ ಮೇಲೇರಿದ್ದು, ಎಂಟನೇ ಸ್ಥಾನಕ್ಕೇರಿದ್ದಾರೆ.