ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯಪುಸ್ತಕಗಳ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
Textbooks play an important role in the educational system: Prof. M. Muniraju
ಬಳ್ಳಾರಿ 27: ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು.
ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರೆ್ಣ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಓದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ. ಚಿಲ್ಕರಾಗಿ ಅವರು ಮಾತನಾಡಿ, ವಿಶ್ವವಿದ್ಯಾಲಯವು ಪ್ರಕಟಿಸಿದ ಪಠ್ಯಪುಸ್ತಕಗಳು ಪ್ರಾಚೀನ ಮತ್ತು ಆಧುನಿಕ ಕವಿಗಳ ಸಂಗಮವಾಗಿದ್ದು, ವೈವಿಧ್ಯಮಯ ಜ್ಞಾನವನ್ನು ನೀಡುವ ಕಣಜಗಳಾಗಿವೆ, ಹೊಸ ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮಚಂದ್ರ ಅವರು ಮಾತನಾಡಿ ಈ ವರ್ಷ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಬಹುಬೇಗ ದೊರೆತಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕರೆ ನೀಡಿದರು.
ಪ್ರಸಾರಾಂಗದ ನಿರ್ದೇಶಕ ಡಾ.ತಿಪ್ಪೇರುದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸಾರಾಂಗವು ವಿಶ್ವವಿದ್ಯಾಲಯದ ಹೃದಯವಾಗಿದ್ದು, ವಿದ್ಯಾರ್ಥಿಗಳ, ಜನಸಾಮಾನ್ಯರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿ ಜ್ಞಾನ ಪ್ರಸರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲಾಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಪಠ್ಯಪುಸ್ತಕಗಳನ್ನು ಸಂಪಾದಿಸಿದ ಡಾ.ಎ.ಎಂ.ರಾಜಶೇಖರಯ್ಯ, ಪ್ರೊ.ನಾಗಣ್ಣ ಕಿಲಾರಿ, ಡಾ.ಮಲ್ಲಿಕಾರ್ಜುನ ಎಂ. ಇವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಕನ್ನಡ ಅಧ್ಯಾಪಕರಾದ ಸರ್ವಮಂಗಳ, ಮಂಜುಳ ಕಾರ್ಯಕ್ರಮವನ್ನು ನಿರೂಪಿಸಿದರು. ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜಿನ ಅಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 