ಭಾರತದ ಸಂವಿಧಾನ ಈ ದೇಶದ ಧರ್ಮಗ್ರಂಥ ಇದ್ದಂತೆ- ಬಸವರಾಜ ಶಿವಣ್ಣನವರ
The Constitution of India is like the scripture of this country - Basavaraja Sivannava
ಹಾವೇರಿ 26 : ಭಾರತ ಸಂವಿಧಾನ ಈ ದೇಶದ ಧರ್ಮಗ್ರಂಥ ಇದ್ದಂತೆ, ಹಲವಾರು ಜಾತಿ, ಭಾಷೆ, ವೈವಿಧ್ಯಮಯವಾದ ಸಂಸ್ಕೃತಿ ಹಾಗೂ ಆಚರಣೆಗಳಿಂದ ಕೂಡಿದ ಈ ದೇಶದ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಸೇರಿದಂತೆ ಸಮಾನತೆ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ ಎಂದು ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಅವರು ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪರಿಶಿಷ್ಟ ಜಾತಿಗಳ ಒಕ್ಕೂಟಗಳು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜರುಗಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆಮಾಡಿ ಅವರು ಮಾತನಾಡಿದರು.
ಮಹಾತ್ಮಗಾಂಧೀಜಿ ಅವರು ಅಹಿಂಸಾ ಮಾರ್ಗದಿಂದ ಶಾಂತಿಯುತವಾಗಿ 1947ರಲ್ಲಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಪ್ರತಿ ಪ್ರಜೆಗೆ ಜಾತ್ಯಾತೀತವಾಗಿ ಸಮಾನ ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ ಅವರು ತಮ್ಮ ಸಮಾಜಕ್ಕೆ ಮಾತ್ರ ಸಂವಿಧಾನ ಬರೆಯಲಿಲ್ಲ, ಎಲ್ಲರಿಗೂ ಸಮಾನತೆ ಕಲ್ಪಿಸುವ ಸಂವಿಧಾನ ದೇಶಕ್ಕೆ ನೀಡಿದ್ದಾರೆ. ಅವರ ಕನಸು ನನಸು ಮಾಡಲು ಸಂವಿಧಾನದ ಆಶಯದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳಿ,್ಳ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್, ಉಪವಿಭಾಗಾಧಿಕಾರಿ ಕಲ್ಯಾಣ ಕಾಂಬ್ಳೆ, ತಹಶೀಲ್ದಾರ ಶರಣಮ್ಮ, ಮುಖಂಡರಾದ ಬಸವರಾಜ ಹೆಡಿಗ್ಗೊಂಡ, ಉಡಚಪ್ಪ ಮಾಳಗಿ, ಹೊನ್ನಪ್ಪ ತಗಡಿನಮನಿ, ಎನ್.ಬಿ.ಕಾಳೆ, ಮಾಲತೇಶ ಯಲ್ಲಾಪೂರ, ಬಸವರಾಜ ಹಾದಿಮನಿ, ಭೀಮಪ್ಪ ಯಲ್ಲಾಪೂರ, ಮಂಜುನಾಥ ಸಣ್ಣಿಂಗಣ್ಣನವರ, ಮಂಜುನಾಥ ಪಾಟೀಲ, ನವೀನ ಸಿದ್ದಣ್ಣನವರ, ಅಶೋಕ ಮರೆಯಣ್ಣನವರ,ವಿಭೂತಿಶೆಟ್ಟರ, ಮಂಜಪ್ಪ ಮರೋಳ, ಸುಭಾಸ ಚವ್ಹಾಣ, ಸುನೀಲ ಬೆಟಗೇರಿ, ದಯಾನಂದ ಸುತ್ತಕೋಟಿ, ಗುಡ್ಡಪ್ಪ ನೆಲೋಗಲ್, ರಮೇಶ ಆನವಟ್ಟಿ, ಸಂಜಯಗಾಂಧಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 