ಎಲ್ಲಾ ನಾಗರೀಕರಿಗೆ ಸಮಾನತೆ ಮತ್ತು ನ್ಯಾಯವನ್ನು ಖಾತರಿಪಡಿಸುವ ಪ್ರಜಾಪ್ರಭುತ್ವವೇ ನಮ್ಮ ದೇಶದ ಸಂವಿಧಾನ
The Constitution of our country is a democracy that guarantees equality and justice to all citizens
ಗದಗ 26 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ಕರಡು ರಚನಾ ಸಮಿತಿಯು 2 ವರ್ಷ 11 ತಿಂಗಳ ಕಾಲದ ನಿರಂತರ ಅಧ್ಯಯನ ಮತ್ತು ಪರಿಶ್ರಮದ ನಂತರ ನವಂಬರ್-25 ರಂದು ಅಂದಿನ ಸಭಾಧ್ಯಕ್ಷರಾಗಿದ್ದ ಡಾ.ರಾಜೇಂದ್ರ ಪ್ರಸಾದ ಅವರಿಗೆ ಹಸ್ತಾಂತರಿಸಿದ್ದರು. ಅದರ ಮರುದಿನವೇ ಸಂಸತನ ಎಲ್ಲಾ ಸದಸ್ಯರು ಇದನ್ನು ಸರ್ವಾನುಮತದಿಂದ ಒಪ್ಪಿ ನಮ್ಮ ಭಾರತ ದೇಶದ ಸಂವಿಧಾನ ಎಂದು ಅಂಗೀಕರಿಸಲಾಗಿದೆ. ಎಲ್ಲಾ ಗ್ರಂಥಕ್ಕಿಂತ ಶ್ರೇಷ್ಠವಾಗಿರುವ ನಮ್ಮ ದೇಶದ ಸಂವಿಧಾನವು ದೇಶದ ಎಲ್ಲಾ ನಾಗರೀಕರಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವ ಪ್ರಜಾಪ್ರಭುತ್ವವೇ ನಮ್ಮ ದೇಶದ ಸಂವಿಧಾನ ಆಗಿದೆ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಹೇಳಿದರು.
ಅವರು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಸಂವಿಧಾನ ದಿನದ ಅಂಗವಾಗಿ ನಗರಸಭೆ ಆವರಣದಲ್ಲಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರೆ್ಣ ಮಾಡಿ ಮಾತನಾಡಿ ಸಂವಿಧಾನದ ರಚನೆಯ ಹಿನ್ನಲೆ, ಅದಕ್ಕಾಗಿ ಅಂಬೇಡ್ಕರ್ ಅವರು ಪಟ್ಟ ಶ್ರಮವನ್ನು ಅರ್ಥ್ಯೆಸಿಕೊಂಡಾಗ ಮಾತ್ರ ಸಂವಿಧಾನದ ಮಹತ್ವತೆ ತಿಳಿಯುತ್ತದೆ. ಇಂತಹ ಸಂವಿಧಾನವನ್ನು ಗೌರವಿಸುವುದು ಮತ್ತು ಅದರಲ್ಲಿ ಉಲ್ಲೇಖಿಸಿರುವ ಬಹುವಿಧದ ಸಂಸ್ಕೃತಿಯನ್ನು ಕಾಪಾಡುವುದು ನಮ್ಮಲ್ಲರ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಮಂಜುನಾಥ ಶ್ರೀಗಿರಿ, ಮಕ್ತುಮಸಾಬ ಮುಲ್ಲಾನವರ, ಮಲೇಶಪ್ಪ ಕಲಾಲ, ರಿಜ್ವಾನ ಮುಲ್ಲಾ, ಮಲ್ಲಪ್ಪ ಬಂಡಿ ಹಾಗೂ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 