ವಿಜಯಪುರ 08: ಆಧುನಿಕ ವಿಜ್ಞಾನ ಬಳಸಿಕೊಂಡು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೇ ನಮ್ಮ ಬೆಳವಣಿಗೆಯ ಹಂತ ಉಚ್ಛಮಟ್ಟಕ್ಕೆ ತಲುಪಲು ಸಾಧ್ಯ ಎಂದು ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂತರ್ಿ ಎಚ್.ಎನ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಜ್ಞಾನಶಕ್ತಿ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ, ಸಹಯಾನ ಮತ್ತು ಬೆಂಗಳೂರಿನ ಸಮುದಾಯ ಕನರ್ಾಟಕ ಇವರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಓದು ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಓದಿ, ಅಥರ್ೈಸಿಕೊಂಡು ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು. ಸಂವಿಧಾನವನ್ನು ಜಾರಿಗೊಳಿಸಿದ ಮೇಲೆ ಜನರು ಅದನ್ನು ಓದಲೇ ಇಲ್ಲ. ಅದರಲ್ಲಿರುವ ಅಂಶಗಳನ್ನು ಅರ್ಥಮಾಡಿಕೊಂಡು ಅಳವಡಿಸಿಕೊಳ್ಳಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಎಲ್ಲ ದೇಶಗಳ ಸಂವಿಧಾನ ರಚನೆಗೆ ಸ್ಫೂತರ್ಿಯಾಗಿದ್ದು ಭಾರತದ ಸಂವಿಧಾನ ಎಂಬುದು ನಮಗೆ ಹೆಮ್ಮೆಯ ಸಂಗತಿ. ಅನೇಕ ಕ್ಷೇತ್ರಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಇಡೀ ದೇಶದಲ್ಲಿಯೇ ಭಾರತ 10ನೇ ಸ್ಥಾನ ಪಡೆದಿದೆ. ಅಲ್ಲದೇ ಮಹಿಳೆಯರ ಏಳಿಗೆ, ಕೃಷಿಯ ಸುಧಾರಣೆ ಮತ್ತು ಇನ್ನಿತರ ಕಾರ್ಯಗಳಿಗೆ ಕಾರಣ ನಮ್ಮ ಸಂವಿಧಾನ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಕುಲಸಚಿವೆ ಪ್ರೊ.ಆರ್. ಸುನಂದಮ್ಮ ಮಾತನಾಡಿ, ಮಹಿಳೆಯರು ಸಂವಿಧಾನದಲ್ಲಿರುವ ಮೀಸಲಾತಿಗಳನ್ನು ಬಳಸಿಕೊಂಡು ಉನ್ನತ ಮಟ್ಟಕ್ಕೆ ತಲುಪಲು ಪ್ರಯತ್ನಿಸಬೇಕು ಎಂದು ವಿದ್ಯಾಥರ್ಿನಿಯರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಎಚ್.ಎನ್. ನಾಗಮೋಹನದಾಸ್ ವಿದ್ಯಾಥರ್ಿನಿಯರೊಂದಿಗೆ ಸಂವಾದ ನಡೆಸಿದರು. ಸಂವಿಧಾನ ಓದು ಅಭಿಯಾನ ಕಾರ್ಯಕ್ರಮದ ಸಂಚಾಲಕ ಡಾ.ವಿಠ್ಠಲ ಭಂಡಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾಥರ್ಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂವಿಧಾನ ಓದು ಅಭಿಯಾನ ಕಾರ್ಯಕ್ರಮದ ಸಂಚಾಲಕಿ ಕೆ.ಎಸ್.ವಿಮಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಗೀತ ವಿಭಾಗದ ವಿದ್ಯಾಥರ್ಿನಿಯರು ಪ್ರಾಥರ್ಿಸಿದರು. ಪ.ಜಾ./ಪ.ಪಂ. ಘಟಕದ ನಿದರ್ೇಶಕ ಡಾ.ಸಕ್ಪಾಲ ಹೂವಣ್ಣ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿ, ವಂದಿಸಿದರು.