ಕೊಪ್ಪಳ : ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಯಮಗಳನ್ನು ಪಾಲಿಸಲು ಮುದ್ರಣ ಸಂಸ್ಥೆಯವರಿಗೆ ಜಿಲ್ಲಾಧಿಕಾರಿ ತಾಕೀತು

ಕೊಪ್ಪಳ 11: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅವಧಿಯಲ್ಲಿ ಜಿಲ್ಲೆಯ ಎಲ್ಲ ಮುದ್ರಣಕಾರರು, ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು  ತಾಕೀತು ಮಾಡಿದರು.  

ಲೋಕಸಭಾ ಚುನಾವಣೆ-2019ರ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮುದ್ರಣಕಾರರು,

ಅಲ್ಲದೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಮುದ್ರಣಕಾರರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಮುದ್ರಣಕಾರರು ನಿಯಮಾನುಸಾರ ಯಾವುದೇ ಜಾತಿ, ಧರ್ಮ ನಿಂದಿಸುವಂತಹ ಹಾಗೂ ಪ್ರಚೋದನಕಾರಿ ವಿಷಯವನ್ನೊಳಗೊಂಡ ಕರಪತ್ರವನ್ನು ಮುದ್ರಿಸಬಾರದು.  ಅಲ್ಲದೆ ವಯಕ್ತಿಕ ನಿಂದನೆ ಮತ್ತು ಕೋಮು ಸಾಮರಸ್ಯ ಕದಡುವಂತಹ ವಿಷಯಗಳನ್ನು ಪ್ರಕಟಿಸಬಾರದು.  ಚುನಾವಣಾ ಪ್ರಚಾರಕ್ಕೆ ಕರಪತ್ರಗಳನ್ನು ಮುದ್ರಿಸುವಾಗ  ಕರಪತ್ರದ ಕೆಳಭಾಗದಲ್ಲಿ ಮುದ್ರಣಾಲಯದ ಹೆಸರು, ಮೊಬೈಲ್ ಸಂಖ್ಯೆ, ಮುದ್ರಣ ಮಾಡಿದ ಕರಪತ್ರಗಳ ನಿಖರ ಸಂಖ್ಯೆಯನ್ನು ಅದರಲ್ಲಿ ನಮೂದಿಸಬೇಕು.  ಅಭ್ಯಥರ್ಿ ಅಥವಾ ನಿಯಮಾನುಸಾರ ನೇಮಕಗೊಂಡ ಚುನಾವಣಾ ಏಜೆಂಟ್ಗಳು ನೀಡಿದ ಕರಪತ್ರ ಸಾಮಗ್ರಿಯನ್ನು ಮಾತ್ರ ಮುದ್ರಣ/ ತಯಾರು ಮಾಡಬೇಕು.  ಮುದ್ರಣಕ್ಕೆ ಕಾಯರ್ಾದೇಶ ಪಡೆಯುವ ಸಂದರ್ಭದಲ್ಲಿ ಅವರ ಹೆಸರು, ಮೊಬೈಲ್ ಸಂಖ್ಯೆ, ಇಬ್ಬರು ಸಾಕ್ಷಿಗಳ ಸಹಿಯೊಂದಿಗೆ ಅಪೆಂಡಿಕ್ಸ್-ಎ ನಮೂನೆಯಲ್ಲಿ ಕಾಯರ್ಾದೇಶ ಪಡೆದುಕೊಂಡು, ನಂತರ ಮುದ್ರಣ ಕಾರ್ಯ ಮುಗಿದ ಬಳಿಕ, ಅಪೆಂಡಿಕ್ಸ್-ಎ ಮತ್ತು ಅಪೆಂಡಿಕ್ಸ್-ಬಿ ನಲ್ಲಿ ಸೂಕ್ತ ಮಾಹಿತಿಯೊಂದಿಗೆ ಘೋಷಣಾ ಪತ್ರವನ್ನು ತಮ್ಮ ಸಂಸ್ಥೆಯ ಮೊಹರು ಹಾಗೂ ಸಹಿಯೊಂದಿಗೆ ಆಯಾ ವಿಧಾನಸಭಾ ಕ್ಷೇತ್ರದ ರಿಟನರ್ಿಂಗ್ ಆಫೀಸರ್ಗೆ ಸಲ್ಲಿಸಬೇಕು.  ಇದು ಮುದ್ರಣಕಾರರ ಕರ್ತವ್ಯವಾಗಿದೆ.  ತಮ್ಮ ಸಂಸ್ಥೆಯ ಅಧಿಕೃತ ರಸೀದಿ, ಬಿಲ್ ಮಾತ್ರ ಬಳಸಬೇಕು.  ಲೆಕ್ಕ ಪತ್ರಗಳಿಗೆ ಸಂಬಂಧಿಸಿದಂತೆ ಬಿಲ್ಗಳು ಹಾಗೂ ರಸೀದಿಗಳನ್ನು ಸಮರ್ಪಕವಾಗಿ ಇರಿಸಿಕೊಳ್ಳಬೇಕು.  ಚುನಾವಣಾ ಅಧಿಕಾರಿಗಳು, ಚುನಾವಣಾ ವೀಕ್ಷಕರು ಯಾವುದೇ ಸಂದರ್ಭದಲ್ಲಿ ಯಾವುದೇ ಮುದ್ರಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದ್ದು, ನಿಯಮಗಳನ್ನು ಉಲ್ಲಂಘಿಸುವ ಮುದ್ರಣಕಾರರಿಗೆ 06 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ಮುದ್ರಣ ಸಂಸ್ಥೆಗಳ ಮಾಲೀಕರು, ಕೇಬಲ್ ಆಪರೇಟರ್ಗಳ ಮಾಲೀಕರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.