ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
ಬ್ಯಾಡಗಿ 12: ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿರುವ ಸ್ವಾತಂತ್ರ್ಯ ವೀರ ಮಹಾದೇವ ಮೈಲಾರ ಸಭಾಭವನದ ಕಟ್ಟಡ ಅರ್ಧಕ್ಕೆ ನಿಂತಿದ್ದು, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಕಟ್ಟಡದ ಕಾಮಗಾರಿಯನ್ನು ಗುರುವಾರ ಪರೀಶಿಲಿಸಿದರು.ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡದ ಬಗ್ಗೆ ಪರೀಶೀಲನೆ ಮಾಡಿದರು.
ಅರ್ಧಕ್ಕೆ ನಿಂತಿರುವ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಿ ಸಭಾಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಮಾಜ ಸೇವಕರಾದ ವಿಜಯ ಬಳ್ಳಾರಿ, ನಾಗನಗೌಡ ಕಲ್ಲಾಪುರ, ಸತೀಶ ಪಾಟೀಲ ಸೇರಿದಂತೆ ಇತರರಿದ್ದರು.