ಜಲಾನಯನ ಯಾತ್ರೆ ಕಾರ್ಯಕ್ರಮಕ್ಕೆ ವಿಧಾನಸಭೆ ಉಪ ಸಭಾಧ್ಯಕ್ಷರಿಂದ ಚಾಲನೆ
ಹಾವೇರಿ 13: ಅಂತರ್ಜಲ ಹೆಚ್ಚಿಸಲು, ಮಳೆ ನೀರು ಸಂರಕ್ಷಣೆ, ಜಮೀನುಗಳಲ್ಲಿ ಬದು ನಿರ್ಮಾಣ ಹಾಗೂ ಕೃಷಿ ಹೊಂಡಗಳ ನಿರ್ಮಾಣಕ್ಕಾಗಿ ಇರುವ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ ಅವರು ಹೇಳಿದರು. ನೆಗಳೂರ ಗ್ರಾಮದ ಪ್ರಾಥಮಿಕ ಸಹಕಾರ ಸಂಘದ ಆವರಣದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾದ ಜಲಾನಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉಪ ಕೃಷಿ ನಿರ್ದೇಶಕ ಜಿ.ಡಿ.ಕೃಷ್ಣಮೂರ್ತಿ ಮಾತನಾಡಿ, ಮಣ್ಣು ನೀರು ಸಂರಕ್ಷಣೆಗೆ ಎಲ್ಲರೂ ಒತ್ತು ನೀಡಬೇಕು ಹಾಗೂ ಮಣ್ಣಿನ ಫಲವತ್ತತೆ ಕಾಪಡಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಬೇಕು. ಒಂದು ಬೆಳೆಗೆ ಸಿಮೀತವಾಗದೆ ಸಮಗ್ರ ಕೃಷಿ ಚಟುವಟಿಕೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ರಶ್ಮಿ ಅವರು ಮಣ್ಣು ಮತ್ತು ನೀರು ಸಂರಕ್ಷಣೆಯ ಕುರಿತು ಉಪನ್ಯಾಸ ನೀಡಿದರು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2.0(ಪಿಎಂಕೆಎಸ್‌ಐ-ಡಬ್ಲ್ಯೂಡಿಸಿ-2.0) ಯೋಜನೆಯಡಿ ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ನೆಗಳೂರು ಮತ್ತು ಮರೋಳ ಗ್ರಾಮಗಳಲ್ಲಿ ಸೃಷ್ಟಿ ಚಿತ್ರ ಬೀದಿನಾಟಕ, ಕುಂಭಮೇಳ ಹಾಗೂ ವೀರಗಾಸೆ ಸಮೇತ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಶಾಲಾ ಮಕ್ಕಳಿಗೆ ಮಳೆ ನೀರು ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಶಂಕ್ರ್ಪ ಕರೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಬ್ಯಾಂಕ್ ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ ಎಂ ಹೀರಮಠ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಎಂ ಎಂ ಮೈದೂರ, ಕೆ.ಎಂ.ಎಫ್. ನಿರ್ದೇಶಕ ಬಸವೇಶಗೌಡ ಪಾಟೀಲ, ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು, ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ವೀರಭದ್ರ್ಪ ಬಿ.ಹೆಚ್ ಸ್ವಾಗತಿಸಿದರು ಹಾಗೂ ಕೃಷಿ ಅಧಿಕಾರಿ ಸಂತೋಷ ಬಡ್ಡಿಯವರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.