ಲೋಕದರ್ಶನ ವರದಿ
ಕೊಪ್ಪಳ 13: ಡಿ.ವಿ.ಗುಂಡಪ್ಪ ಅವರ ತೊಟ್ಟಿಲಲ್ಲಿ ಮಗುವಾಗಿ ಬೆಳೆದ ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘ ವೃತ್ತಿಪರವಾದದ್ದು, ಪ್ರತಿಯೊಬ್ಬ ವೃತ್ತಿ ಪತ್ರಕರ್ತನ ಘನತೆಯನ್ನು ತಂದು ಕೊಡುವ ಕಾರ್ಯವನ್ನು ನಮ್ಮ ಸಂಘಟನೆ ಮಾಡುತ್ತಿದೆ ಎಂದು ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.
ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಸಮಿತಿಯು ಹಮ್ಮಿಕೊಂಡಿದ್ದ, ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಪತ್ರಕರ್ತರ ಹಲವಾರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಹಾಗೂ ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಸಂಘಟನೆಯ ಮೂಲಕ ತಡೆದು ಪ್ರತಿಯೊಬ್ಬ ವೃತ್ತಿ ಪತ್ರಕರ್ತನಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಇನ್ನೂ ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘಟನೆಯು ರಾಜ್ಯದಲ್ಲಿ ಒಳ್ಳೆಯ ಪ್ರಶಂಸೆಯನ್ನು ಪಡೆದಿದೆ ಎಂದು ಶ್ಲಾಘೀಸಿದರು. ಅಲ್ಲದೇ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಪತ್ರಿಕಾ ಭವನದ ಕಟ್ಟಡ ನಿಮರ್ಾಣಕ್ಕೆ ಸೂಕ್ತ ನಿವೇಶನವನ್ನು ಗುರುತಿಸಿ ಶೀಘ್ರದಲ್ಲೇ ನಿಮರ್ಾಣ ಕಾರ್ಯ ಪ್ರವೃತ್ತರಾಗುವುದಾಗಿ ಭರವಸೆ ನೀಡಿದರು, ಹಾಗೂ ಪತ್ರಕರ್ತರು ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ಭಾಗ್ಯ ಮತ್ತು ಪತ್ರಕರ್ತರರಿಗೆ ಜಿಲ್ಲೆಯಲ್ಲಿ ಸಂಚರಿಸಲು ಸರಕಾರದ ವತಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಖ್ಯಮಂತ್ರಿಗಳ ಹಾಗೂ ಸಂಬಂಧಿಸಿದ ಇಲಾಖೆ ಸಚಿವರ ಮಟ್ಟದಲ್ಲಿ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದ ತತ್ತರಿಸಿ ನೆಲೆ ಕಳೆದುಕೊಂಡ ಕೊಡಗು ನೆರೆ ಸಂತ್ರಸ್ತರಿಗೆ ಜಿಲ್ಲಾ ಪತ್ರಕರ್ತರ ಸಂಘಟನೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಮೂಲಕ ಸಹಾಯಧನವನ್ನು ಡಿಡಿ ರೂಪದಲ್ಲಿ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಂ.ಸಾದಿಕ್ ಅಲಿ ವಹಿಸಿದ್ದರು, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಿ.ಎಸ್.ಗೋನಾಳ, ನಾಮ ನಿದರ್ೇಶಿತ ರಾಜ್ಯಸದಸ್ಯ ಹರೀಶ್ ಹೆಚ್.ಎಸ್. ಕೋಶಾಧ್ಯಕ್ಷ ಸಿರಾಜ್ ಬಿಸರಳ್ಳಿ, ಸದಸ್ಯರಾದ ಸಿದ್ದನಗೌಡ ಪಾಟೀಲ್, ರಾಜು ಬಿ.ಆರ್. ಮೌಲಾ ಹುಸೇನ್ ಬುಲ್ಡಿಯಾರ್ ಮಾತನಾಡಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಎನ್.ಎಮ್.ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರೆ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶಿವರಾಜ ನುಗುಡೋಣಿ ವಂದಿಸಿದರು ಹಾಗೂ ಎಲ್ಲಾ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರು ಸೇರಿದಂತೆ ಇತರರು ಉಪಸ್ಥಿತರಿದ್ದರು