ಅಡಿಕೆ ಬೆಳೆಯ ಕೊಳೆ ರೋಗ ಪರಿಹಾರ ಕ್ರಮಕ್ಕೆ ಪ್ರತ್ಯೇಕ ಸಭೆಗೆ ಸಭಾಧ್ಯಕ್ಷರ ಸಲಹೆ
ಬೆಳಗಾವಿ: 14 : ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಕೊಳೆ ರೋಗದಿಂದ ನಷ್ಟವಾಗಿರುವ ಅಡಿಕೆ ಬೆಳೆ ಪರಿಹಾರ ಕುರಿತಂತೆ ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಕೆ ಆರ್ ರಮೇಶ್ಕುಮಾರ್ ಅವರು ಶುಕ್ರವಾರ ಸಕರ್ಾರಕ್ಕೆ ಸಲಹೆ ನೀಡಿದರು.
ಪ್ರಶ್ನೋತ್ತರ ವೇಳೆ ಸದಸ್ಯ ಹರೀಶ್ ಪುಂಜಾ ಅವರ ಪ್ರಶ್ನೆಗೆ ತೋಟಗಾರಿಕಾ ಸಚಿವ ಎಂ ಸಿ ಮನಗೂಳಿ ಅವರು ಉತ್ತರಿಸುವ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟ ಕುರಿತಂತೆ ವಿವಿಧ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಸಕರ್ಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಬೇಕು. ಚಚರ್ೆಗೆ ಅವಕಾಶ ಮಾಡಿಕೊಡಬೇಕೆಂದು ಶಾಸಕಾರದ ಸುನೀಲ್ ಕುಮಾರ್, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು.
ಸದಸ್ಯರ ಮನವಿಗೆ ಸ್ಪಂದಿಸಿದ ರಮೇಶ್ ಕುಮಾರ್ ಅವರು ಅಡಿಕೆ ಬೆಳೆಗಾರರ ಸಂಕಷ್ಟ ಕುರಿತಂತೆ ಮುಂದಿನ ವಾರ ತಮ್ಮ ಕೊಠಡಿಯಲ್ಲಿ ಪ್ರತ್ಯೇಕ ಸಭೆ ನಡೆಸಿ ಚಚರ್ಿಸಿ ಪರಿಹಾರ ಕಂಡು ಹಿಡಿಯಲು ಮುಂದಾಗೋಣ ಎಂದು ಚಚರ್ೆಗೆ ತೆರೆ ಎಳೆದರು.
ತೋಟಗಾರಿಕಾ ಸಚಿವರಾದ ಎಂ.ಸಿ ಮನಗೋಳಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಳೆ ರೋಗದಿಂದ ಅಡಿಕೆ ಬೆಳೆ ಹಾನಿ ವಿವರ ಹಾಗೂ ಸಕರ್ಾರದ ಪರಿಹಾರ ಕ್ರಮಗಳ ಕುರಿತಂತೆ ವಿವರಿಸುತ್ತಾ 2018-19 ನೇ ಸಾಲಿನಲ್ಲಿ ಅತಿವೃಷ್ಟಿಯಿಂದ 33,595 ಹೆಕ್ಟರ್ ಪ್ರದೇಶದ ಅಡಿಕೆ ಬೆಳೆಗೆ ಕೊಳೆ ರೋಗ ವ್ಯಾಪಿಸಿದೆ. ಇದರಿಂದ 252 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.
ಅಡಿಕೆ ಬೆಳೆ ಒಳಗೊಂಡಂತೆ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಪರಿಹಾರ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಗೆ 60.47 ಕೋಟಿ ರೂ. ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪರಿಹಾರ ಒದಗಿಸಲು 175.27 ಕೋಟಿ ರೂ. ಅನುದಾನ ಒದಗಿಸಲು ಕೇಂದ್ರ ಸಕರ್ಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಂತೆ ಹಣ ಬಿಡುಗಡೆಯಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಕೊಳೆ ರೋಗದ ನಿಯಂತ್ರಣಕ್ಕಾಗಿ ರೈತರಿಗೆ ಪ್ರಾತ್ಯಕ್ಷಿಕೆಯ ವಿವರಗಳನ್ನು ಮಾಧ್ಯಮಗಳ ಮೂಲಕ ಪ್ರಚಾರ ಹಾಗೂ ಕರ ಪತ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ರೋಗ ನಿಯಂತ್ರಣಕ್ಕೆ ಮೈಲುತುತ್ತು (ಕಾಪರ್ ಸಲ್ಫೇಟ್) ಹಾಗೂ ಇತರ ಸಸ್ಯ ಸಂರಕ್ಷಣಾ ಔಷಧಿಗಳನ್ನು ಖರೀದಿಸಲು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಅಭಿಯಾನದಡಿ ಪ್ರತಿ ಹೆಕ್ಟರ್ಗೆ 1200 ರೂ. ಸಹಾಯಧನ ನೀಡಲಾಗುತ್ತಿದೆ. ಗರಿಷ್ಠ ನಾಲ್ಕು ಎಕರೆವರೆಗೆ ಪ್ರತಿ ರೈತರಿಗೆ ಸಹಾಯಧನ ಒದಗಿಸಲಾಗುತ್ತಿದೆ ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣ ಯೋಜನೆ ಅಡಿ ಪ್ರತಿ ಹೆಕ್ಟರ್ಗೆ 7500 ರೂ. ಸಾಮಾನ್ಯ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 9000 ರೂ. ವರೆಗೆ ಸಹಾಯಧನ ಒದಗಿಸಲಾಗುತ್ತಿದೆ.
ತಾಲೂಕು ಪಂಚಾಯತ್ ಯೋಜನೆ ಅಡಿ ಒಂದು ಹೆಕ್ಟರ್ಗೆ 2000 ರೂ ನಂತೆ ಸಹಾಯಧನ ಹಾಗೂ ಶೇಕಡಾ 33 ಕ್ಕಿಂತಲೂ ಹೆಚ್ಚು ಫಸಲು ಹಾನಿಯಾದಲ್ಲಿ ಪ್ರಕೃತಿ ವಿಕೋಪ ಪರಿಹಾರದ ಅಡಿ ಪ್ರತಿ ಹೆಕ್ಟರ್ಗೆ 18000 ರೂ. ಗಳನ್ನು ಗರಿಷ್ಠ ಎರಡು ಎಕರೆವರೆಗೆ ನೀಡಲಾಗುತ್ತಿದೆ. ಹವಾಮಾನ ವೈಪರೀತ್ಯದಿಂದ ಅಡಿಕೆ ಬೆಳೆಗಾರರಿಗೆ ಆಗುವ ನಷ್ಟವನ್ನು ಭರಿಸಲು ಬೆಳೆ ವಿಮೆ ಯೋಜನೆ ಅಳವಡಿಸಲಾಗಿದೆ ಎಂದು ತಿಳಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 