ಗದಗ 22: ಗದಗ ಜಿಲ್ಲಾಡಳಿತದಿಂದ ಬರುವ ಅಗಸ್ಟ 15 ರಂದು ಜರುಗುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯದ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗದಗ-ಬೆಟಗೇರಿ ಶಹರದ ಎಲ್ಲ ಶಾಲೆ-ಕಾಲೇಜು, ಸಹಕಾರಿ, ರಾಷ್ಟ್ರೀಕೃತ ಬ್ಯಾಂಕುಗಳು, ಸರಕಾರಿ, ಅರೆ ಸರಕಾರಿ ಹಾಗೂ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಆಯಾ ಕಚೇರಿ ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರು ಅಗಸ್ಟ 15 ರಂದು ಬೆ. 7.30 ಗಂಟೆಗೆ ಧ್ವಜಾರೋಹಣ ನೆರವೇರಿಸಲು ಕ್ರಮ ಜರುಗಿಸುವಂತೆ ಸೂಚಿಸಿದರು. ಅಂದು ಮುಂಜಾನೆ 9.00 ಗಂಟೆಗೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಜರುಗುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಶಾಲಾ ಕಾಲೇಜು ವಿಧ್ಯಾಥರ್ಿಗಳು, ಸರಕಾರಿ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಹಾಜರಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಜರುಗುವ ಉಸ್ತುವಾರಿ ಸಚಿವರಿಗೆ ಸಲ್ಲಿಸುವ ಗೌರವ ರಕ್ಷೆ, ಪಥ ಸಂಚಲನ ದಳಗಳ ಆಯ್ಕೆ, ಸಚಿವರ ಸಂದೇಶ, ಬಹುಮಾನ ವಿತರಣೆ, ಸಾಧಕರಿಗೆ ಸನ್ಮಾನ, ಆಮಂತ್ರಣ ಪತ್ರಿಕೆ ಮುದ್ರಣ, ಕ್ರೀಡಾಂಗಣ ಹಾಗೂ ಸಾಯಂಕಾಲ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚಚರ್ಿಸಲಾಯಿತು. ನಗರದ ಪ್ರಮುಖ ವೃತ್ತಗಳಲ್ಲಿ ಸ್ವಾತಂತ್ರೋತ್ಸವ ಶುಭಾಶಯ ಕುರಿತು ಮುದ್ರಿಸಲಾಗುವ ಬ್ಯಾನರಗಳನ್ನು ಬಟ್ಟೆ ಬ್ಯಾನರಗಳಲ್ಲಿ ಮುದ್ರಿಸಲು ಸೂಚಿಸಿದ ಅವರು ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದರು. ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ಶಿಸ್ತು, ಸಂಯಮ ಹಾಗೂ ಸಂಭ್ರಮದಿಂದ ನಡೆಸಲು ಅಗತ್ಯದ ಎಲ್ಲ ಕ್ರಮಗಳನ್ನು ಸಂಬಂದಿತ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಲು ಸೂಚಿಸಿದರು. ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ದಿನದಂದು ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಕ್ರಮ ಜರುಗಿಸಲು ಸೂಚಿಸಿದ ಅವರು ಕಾರ್ಯಕ್ರಮದ ಸ್ಥಳದಲ್ಲಿ ಸ್ವಚ್ಛತೆ, ನೀರು ಪೂರೈಕೆ, ತುತರ್ು ವೈಧ್ಯಕೀಯ ವ್ಯವಸ್ಥೆ ಮಾಡುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಎನ್. ರುದ್ರೇಶ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.