ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ


ಜಮ್ಮು, ಮೇ 2 ಪಾಕಿಸ್ತಾನ ಸೇನೆ ಗುರುವಾರ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್ನ ಗಡಿ ನಿಯಂತ್ರಣಾ ರೇಖೆ ಬಳಿಯ ಹಳ್ಳಿಗಳತ್ತ ಶೆಲ್ ದಾಳಿ ನಡೆಸಿದೆ. 

ಪಾಕಿಸ್ತಾನದ ಸೇನೆ ಇಂದು ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿದ್ದು, ಪೂಂಚ್ನ ಶಹಪುರ್  ವಲಯಗಳಲ್ಲಿ ದಾಳಿ ನಡೆಸಿದೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. 

ಪಾಕಿಸ್ತಾನ, ಗಡಿ ನಿಯಂತ್ರಣಾ ರೇಖೆಯಲ್ಲಿ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಅಪ್ರಚೋದಿತ ದಾಳಿ ಆರಂಭಿಸಿ, ಬಳಿಕ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡಿದೆ. ಈವರೆಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಈ ಪ್ರದೇಶದ ಎಲ್ಲ ಶಾಲೆಗಳಿಗೆ ಗುರುವಾರ ರಜೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.