ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ : ಶಾಸಕ ಶ್ರೀನಿವಾಸ
The central government has not supplied fertilizer as per the state's demand, but the central gover
ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ : ಶಾಸಕ ಶ್ರೀನಿವಾಸ
ಹಾನಗಲ್ 1: ಬಿತ್ತನೆ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿದ ಬಿಜೆಪಿಯಿಂದ ರಾಜ್ಯ ಸರ್ಕಾರ ಪಾಠ ಕಲಿಯಬೇಕಿಲ್ಲ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಕೇಂದ್ರದಿಂದ ನಮ್ಮ ರಾಜ್ಯಕ್ಕೆ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು. ಆದರೆ 5.27 ಲಕ್ಷ ಮೆಟ್ರಿಕ್ ಟನ್ ಮಾತ್ರ ಪೂರೈಕೆಯಾಗಿದೆ. ರಸಗೊಬ್ಬರ ಉತ್ಪಾದನೆ ಮಾಡಿ, ಪೂರೈಕೆ ಮಾಡುವುದು ಕೇಂದ್ರ ಸರ್ಕಾರ. ಬಿಜೆಪಿ ಆಡಳಿತ ನಡೆಸುತ್ತಿರುವ ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಸಹ ರಸಗೊಬ್ಬರದ ಕೊರತೆ ಇದೆ. ವಾಸ್ತವ ಹೀಗಿರುವಾಗ ರೈತರ ದಿಕ್ಕು ತಪ್ಪಿಸುವ ಉದ್ದೇಶದಿಂದ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.ಹಿಂದೆ ಬಿ.ಎಸ್.ಯಡಿಯೂರ್ಪ ಅವರು ಮುಖ್ಯಮಂತ್ರಿ ಇದ್ದಾಗ ರಸಗೊಬ್ಬರ ಕೇಳಿದ ರೈತರ ಮೇಲೆ ಹಾವೇರಿಯಲ್ಲಿ ಗುಂಡು ಹಾರಿಸಿ ಇಬ್ಬರು ರೈತರನ್ನು ಕೊಂದಿದ್ದರು. ಅದನ್ನೊಮ್ಮೆ ನೆನಪಿಸಿಕೊಳ್ಳಲಿ ಎಂದಿರುವ ಶಾಸಕ ಮಾನೆ, ಹಾವೇರಿ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಅವಧಿಗೆ ಮೊದಲೇ ಮುಂಗಾರು ಆರಂಭಗೊಂಡಿದೆ. ಜಿಟಿ ಜಿಟಿ ಮಳೆ ಬೀಳುತ್ತಿದೆ. ಸಹಜವಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆಗೆ ಮುಂದಾಗಿದ್ದಾರೆ. ಬಿಜೆಪಿ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರ ಕೃಷಿ ಸಚಿವರೊಂದಿಗೆ ಮಾತನಾಡಿ ಕೂಡಲೇ ರಾಜ್ಯಕ್ಕೆ ಅ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 