ಸಾಲುಮರದ ತಿಮ್ಮಕ್ಕ ನಿಧನ ನಾಡಿಗೆ ತುಂಬಲಾರದನಷ ್ಟಉಂಟುಮಾಡಿದೆ : ಶಿವಮೂರ್ತಿ ಇಟಗಿ
The death of Thimmakka, a tree-dwelling tree, has caused irreparable loss to the country: Shivamurt
ಯಲಬುರ್ಗಾ 18: ಗ್ರಾಮಾಂತರ ಪ್ರದೇಶದಲ್ಲಿ ಹುಟ್ಟಿ ವೃಕ್ಷಮಾತೆಯಾಗಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಸಾಧಕಿ ಶತಾಯಿಷಿ ಸಾಲುಮರದ ಡಾ.ತಿಮ್ಮಕ್ಕ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಯಲಬುರ್ಗಾ ತಾಲೂಕು ಅಧ್ಯಕ್ಷ ಶಿವಮೂರ್ತಿಇಟಗಿ ಹೇಳಿದರು. ಪಟ್ಟಣದ ಶ್ರೀಧರ ಮುರಡಿ ಹಿರೇಮಠದಲ್ಲಿ ಸೋಮುವಾರ ಶತಾಯುಷಿ ಡಾ. ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಯಲಬುರ್ಗಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ ತಿಮ್ಮಕ್ಕನ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿ, ಸಾಲುಮರದ ತಿಮ್ಮಕ್ಕ ದಂಪತಿ ರಸ್ತೆ ಬದಿ ಗಿಡನೆಟ್ಟು ಮಕ್ಕಳಂತೆ ಪೋಷಣೆ ಮಾಡಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರು ಸಾಧಕ ಮಹಿಳೆಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಎಂದರು. ಬಳಿಕ ಹಿರಿಯ ಸಾಹಿತಿಗಳು ವೀರಣ್ಣ ನಿಂಗೋಜಿ ಅವರು ಮಾತನಾಡಿ, ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ ಎಂದರು.
ನಂತರ ಸಂತೋಸಿಮಾ ಜ್ಯೋಶಿ, ಸುನೀತಾ ಪತಂಗರಾಯ ಅವರು ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರು ಹಳ್ಳಿಯ ಸಾಮಾನ್ಯ ಮಹಿಳೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದ ಸಾಧಕ ಮಹಿಳೆಯರಲ್ಲಿ ಒಬ್ಬರಾಗಿದ್ದರು ಎಂದರೆ ಅದಕ್ಕೆ ಅವರ ಶ್ರಮ ಮತ್ತು ಇಚ್ಛಾಶಕ್ತಿಯೇ ಕಾರಣ ಎಂದರು. ಕಾರ್ಯಕ್ರಮವನ್ನು ಸವಿತಾ ಓಜನಹಳ್ಳಿ ಅವರು ನಿರೂಪಿಸಿ ವಂದಿಸಿದರು. ಈ ವೇಳೆ ಅಶೋಕ ಪಾಟೀಲ್, ಬಸವರಾಜ ರಾಟಿ, ಖಾದರ್ ಪಾಷಾ, ಶರಣಪ್ಪ ದಾನಕೈ, ಸ ಶರಣಪ್ಪ ಪಾಟೀಲ್ , ಎಂ ಡಿ ಅಲಿ, ಬಸವರಾಜ ಗೌಡ , ಸವಿತಾ ಮುರಡಿಮಠ, ನಂದಾ ಜಾಲಗಾರ್, ಉಮೇಶ ಕುಂಬಾರ, ಯೋಗೇಶ ಸೇರಿ ಇತ್ತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 