ಹಾವೇರಿ: ಗ್ರಾಮೀಣ ಪ್ರದೇಶದಲ್ಲಿ ವಲಸೆ ತಪ್ಪಿಸಿಲು ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳುವುದು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ತಾಲೂಕ ಕಾರ್ಯನಿವರ್ಾಹಕ ಅಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ ಹೇಳಿದರು.
ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ.
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿಮರ್ಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನ ಹೊಸಕಿತ್ತೂರು ಗ್ರಾಮ ಪಂಚಾಯತಿಯ ಬೈಲಮಾದಪುರ ರಸ್ತೆಯಲ್ಲಿರುವ ಹೊಸಕಿತ್ತೂರು ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯನ್ನು ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಕೆ ಲೀಲಾವತಿ ಪರಿಶೀಲಿಸುವ ಮೂಲಕ ಕೂಲಿಕಾರರೊಂದಿಗೆ ರೋಜಗಾರ್ ದಿನಾಚರಣೆಯನ್ನು ಆಚರಿಸಿ ಕೂಲಿಕಾರರಿಗೆ ಉದ್ಯೋಗ ಚೀಟಿಯನ್ನು ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ವಿತರಿಸಿದರು.
ಜಿಲ್ಲೆಯಲ್ಲಿ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ನೈಸಗರ್ಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ಜಿಲ್ಲಾ ಪಂಚಾಯತಿ ಮುಂದಾಗಿದೆ.
ಜಿಲ್ಲೆಯು ಪದೇ ಪದೇ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು, ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿಯ ಸಹಾಯಕ ನಿದರ್ೇಶಕರು(ಗ್ರಾ.ಉ) ಟಿ.ಆರ್. ಮಲ್ಲಾಡದ್, ಜಿಲ್ಲಾ ಪಂಚಾಯತ ಎ.ಡಿ.ಪಿ.ಸಿ ಮಹಾಂತೆಶ ನರೆಗಲ್ಲ, ದೀಪಕ್ ನಾಯ್ಕ್, ತಾಲೂಕ ಐ.ಇ,ಸಿ ಸಂಯೋಜಕ ಗಿರೀಶ ಬೆನ್ನೂರು ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು