ಜಿಲ್ಲೆಯು ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷೆಯಲ್ಲಿದೆ-ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ

 ಜಿಲ್ಲೆಯು ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷೆಯಲ್ಲಿದೆ-ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್  ದಾನಮ್ಮನವರ The district is expecting good results this time - District Magistrate Dr. Vijaya Mahantesh Danamma

ಹಾವೇರಿ ಮಾರ್ಚ್ 09: ಎಸ್ಎಸ್ಎಲ್ಸಿ ಪರೀಕ್ಷೆ- 1 ನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು. ಬಾರಿ ಜಿಲ್ಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಉತ್ತಮ  ಫಲಿತಾಂಶದ ನಿರೀಕ್ಷೆಯಲ್ಲಿದೆ   ನಿಟ್ಟಿನಲ್ಲಿ ಇಲಾಖೆಯು ಸಕಲ ತಯಾರಿ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆ-1 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ 18 ರಿಂದ ಏಪ್ರಿಲ್  02   ವರೆಗೆ ಜಿಲ್ಲೆಯಲ್ಲಿ 471 ಪ್ರೌಢ ಶಾಲೆಗಳಿಂದ ಒಟ್ಟು 81  ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು 23,361  ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

 ಅದರಲ್ಲಿ 21453  ರೆಗ್ಯುಲರ್ ಫ್ರೆಶ್  ವಿದ್ಯಾರ್ಥಿಗಳು, 534 ಪ್ರೈವೆಟ್ ಫ್ರೆಶ್ ವಿದ್ಯಾರ್ಥಿಗಳು ಹಾಗೂ 1374 ರೆಗ್ಯುಲರ್ ರಿಪೀಟರ್ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, 10,200 ಹೊಸ ವಿದ್ಯಾರ್ಥಿಗಳು ಹಾಗೂ 11,253 ಹೊಸ ವಿದ್ಯಾರ್ಥಿನಿಯರು ಪರೀಕ್ಷೆ  ಬರೆಯಲ್ಲಿದ್ದಾರೆ.

ಪರೀಕ್ಷೆಯಲ್ಲಿ ಯಾವುದೇ  ಅಕ್ರಮಗಳು  ನಡೆಯದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ಶುದ್ಧ ನೀರು, ಕೊಠಡಿ ಸ್ವಚ್ಛತೆ, ಅಗತ್ಯ ಬೆಳಕಿನ ಸೌಲಭ್ಯ, ಸಿಸಿ ಟಿವಿ, ಉತ್ತಮ ಬೆಂಚ್ಚಿನ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು.

 ಇದರಲ್ಲಿ ಯಾವುದೇ ರಾಜಿ ಇಲ್ಲ ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ರೀತಿ ತೊಂದರೆ ಯಾಗಬಾರದು ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಪರೀಕ್ಷೆ ಕೇಂದ್ರಕ್ಕೆ ನಿಯೋಜನೆಗೊಂಡ ಎಲ್ಲ ಸಿಬ್ಬಂದಿಗಳಿಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಯಾವುದೇ ಕಾರಣಕ್ಕೂ ಮೊಬೈಲ್ ತೆಗೆದುಕೊಂಡು ಬರುವಂತಿಲ್ಲ ನಿಟ್ಟಿನಲ್ಲಿ ಶಿಸ್ತು ಕ್ರಮ ವಹಿಸಿ ಎಂದರು.

ಬೆಳಗಾವಿ ವಿಭಾಗದ 9 ಶೈಕ್ಷಣಿಕ ಜಿಲ್ಲೆಗಳಲ್ಲಿ 4 ಜಿಲ್ಲೆಗಳು ಕಳೆದ ಬಾರಿ ಪ್ರತಿಶತ 80% ರಷ್ಟು ಫಲಿತಾಂಶ ಮಾಡಿವೆ ಹಾವೇರಿ 5 ನೇ ಸ್ಥಾನದಲ್ಲಿದೆ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಬೇಕುಪರೀಕ್ಷೆ ಫಲಿತಾಂಶ ಸುಧಾರಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಯಕವಾಗಿದೆ ಕಲಿಕೆಯಲ್ಲಿ ಹಿಂದೆ ಇರುವ ಹಾಗೂ ಮಾನಸಿಕವಾಗಿ ಕುಗ್ಗಿರುವ ವಿದ್ಯಾರ್ಥಿಗಳನ್ನು  ಗುರುತಿಸಿ ಅವರ ಮನೋ ಸಾಮರ್ಥ್ಯವನ್ನು ಹೆಚ್ಚಿಸಿ, ಅವರಿಗೆ ಧೈರ್ಯ ತುಂಬಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು ಎಂದರು.

ಪರೀಕ್ಷಾ ದಿನಗಳಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ತಹಸೀಲ್ದಾರ್ರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಖಜಾನೆ ಅಧಿಕಾರಿಗಳು   ತಮಗೆ ವಹಿಸಿಕೊಟ್ಟ ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೆ ನಿರ್ವಹಿಸಬೇಕು ಎಂದರು.

ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಬಿಗಿ ಬಂದೋಬಸ್ತನಲ್ಲಿ  ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು  ಪ್ರಶ್ನೆ ಪತ್ರಿಕೆಗಳ ಸಾಗಾಟಕ್ಕೆ ಖಾಸಗಿ ವಾಹನಗಳ ಬಳಕೆ ಮಾಡಬಾರದು ಸರ್ಕಾರಿ ವಾಹನಗಳನ್ನು ಮಾತ್ರ ಬಳಕೆ ಮಾಡಬೇಕು. ಇದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು  ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ ಎಂದರು.

ಪರೀಕ್ಷಾ ದಿನಗಳಂದು ಹೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವುದರೊಂದಿಗೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾದೀನ ದಳಗಳ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದರು.

ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ನಿಗಾ ವಹಿಸಬೇಕು, ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ವಿದ್ಯುತ್ ತೊಂದರೆಯಾಗದ ರೀತಿ ಜನರೇಟರ್ ಇಲ್ಲವೆ ಯುಪಿಎಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಕೊಠಡಿಯ ಹೊರಗಡೆಯ 200ಮೀ ಅಳತೆಯಲ್ಲಿ ನಿಷೇಧಾಜ್ಷೆ ಜಾರಿಯಿದ್ದು, ಅದಕ್ಕೆ ಅವಶ್ಯಕವಾದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸ್ ಇಲಾಖೆ ಸಕಲ ತಯಾರಿ ಮಾಡಿಕೊಂಡಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಯಶೋಧ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಪೊಲೀಸ್  ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಡಿಡಿಪಿಐ ಮೋಹನ ದಂಡಿನ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.