ಸಂಭ್ರಮದ ಶ್ರೀ ಗವಿಸಿದ್ದೇಶ್ವರ ರಥೋತ್ಸವ
The festive Sri Gavisiddeshwara Chariot Festival
ಹೂವಿನಹಡಗಲಿ 7: ಪಟ್ಟಣದ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ, ಸಡಗರದಿಂದ ಶುಕ್ರವಾರ ಸಾಯಂಕಾಲ ನಡೆಯಿತು.ಸ್ವಾಮಿಯ ಉತ್ಸವ ಮೂರ್ತಿಯನ್ನು ಶ್ರೀಮಠದಿಂದ ಭವ್ಯ ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಪ್ರದಾಯದಂತೆ ಫಲಪುಷ್ಪಗಳಿಂದ ಸರ್ವಾಲಂಕೃತಗೊಂಡಿದ್ದ ರಥಕ್ಕೆ ಪೂಜೆ, ಮಹಾ ಮಂಗಳಾರತಿ ಸಲ್ಲಿಸಿದ ನಂತರ ಗವಿಸಿದ್ದೇಶ್ವ ಸ್ವಾಮಿಯ ಜಯಘೋಷ, ಹರ್ಷೋದ್ಗಾರಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಾನಾ ವಾದ್ಯಗಳು, ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯ ರಥೋತ್ಸವಕ್ಕೆ ಮೆರುಗು ತಂದಿದ್ದವು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮಿ ಸೇರಿದಂತೆ ಹರ ಗುರು ಚರ ಮೂರ್ತಿಗಳು ಭಾಗವಹಿಸಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 