ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.
The goal of every teacher should be for the last student of every school to receive a good educatio
ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.
ಕಾರವಾರ 25 : ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಮತ್ತು ಫಲಿತಾಂಶ ಪಡೆಯುವುದು ಪ್ರತಿಶಾಲೆಯ ಮತ್ತು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು. ಆನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿ ವಿಶೇಷ ಕ್ರಿಯಾಯೋಜನೆ ತಯಾರಿಸಿ ಬೋಧನೆ ಕೈಗೊಂಡಲ್ಲಿ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ನೂರಕ್ಕೆನೂರು ಸಾಧಿಸಬಹುದು ಎಂದು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಎಎಖಾಜಿರವರು ಅಭಿಪ್ರಾಯಪಟ್ಟರು. ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಆಕಸ್ಮಿಕ ಸಂದರ್ಶನ ನೀಡಿದ ಸಂದರ್ಭದಲ್ಲಿ ಶಾಲೆಯ ವತಿಯಿಂದ ಮಾಡಲಾದ ಸನ್ಮಾನ ಸ್ವೀಕರಿಸಿ ಮೇಲಿನಂತೆ ಹೇಳಿದರು. ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಫಲಿತಾಂಶ ಉತ್ತಮಪಡಿಸಲು ಮಾರ್ಗದರ್ಶನ ಮಾಡಿದರು. "ಶನಿವಾರಸಂಭ್ರಮ" ನಿಮಿತ್ತ ಹಮ್ಮಿಕೊಂಡಿದ್ದ "ಸಾರ್ವಜನಿಕ ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ "ಕಾರ್ಯಕ್ರಮದ ಮಹತ್ವದ ಕುರಿತು ಇದೇ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು. ಶಾಲೆಯ ಸ್ವಚ್ಛತೆ ಮತ್ತು ಶಿಸ್ತುಗಮನಿಸಿ ಪ್ರಶಂಸಿಸಿದರು. ಮುಖ್ಯೋಪಾಧ್ಯಾಯರಾದ ಆರ್ಸಿರಾಠೋಡ ಮಾತನಾಡಿ ಶಾಲಾಮಕ್ಕಳ ಗುಣಾತ್ಮಕ ಕಲಿಕೆಗೆ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಿಆರ್ಿ ಎಂ ಎನ ಕರಡಿಗುಡ್ಡ, ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಸಂತೋಷ ನಿಂಗರಡ್ಡಿ, ಶಿಕ್ಷಕರಾದ ಬಿ ಜಿ ಪಾಟೀಲ, ಜೆಕೆಪಾಟೀಲ್, ಹಾಗೂ ಇತರರು ಉಪಸ್ಥಿತರಿದ್ದರು. ಖ ಬಿ ಕೊಡ್ಲಿ ನಿರೂಪಿಸಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 