ಕಂಪ್ಲಿಯಲ್ಲಿ ಪ.ಜಾತಿ, ಪ.ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮ
The government has formulated a program for the people of Scheduled Caste and Scheduled Tribe in Ka
ಬಳ್ಳಾರಿ 11: ಡವರ ಪರ ನಿಲ್ಲುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ನಮ್ಮ ಕಾಂಗ್ರೆಸ್ ಸರ್ಕಾರ ನಮ್ಮ ಹೆಮ್ಮೆಯಾಗಿದೆ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅಭಿಮತ ವ್ಯಕ್ತಪಡಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಕಂಪ್ಲಿ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ಬಡವರ, ದೀನದಲಿತರ, ರೈತರ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೊಳಿಸಿದ ಯೋಜನೆಗಳು ಜನಪ್ರಿಯವಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರೈಸಿದ್ದು, ರಾಜ್ಯದಲ್ಲಿ ಆಶ್ವಾಸನೆ ನೀಡಿದಂತಹ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಜನರ ಜೀವನಮಟ್ಟವನ್ನು ಸುಧಾರಿಸಿದ್ದು, ನುಡಿದಂತೆ ನಡೆದುಕೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಐದು ಯೋಜನೆಗಳನ್ನು ಜಾರಿಗೊಳಿಸಿ ಬಡವರ ವರದಾನವಾಗಿ ಅವರ ಆರ್ಥಿಕಾಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಬಿಂಬಿಸಿದರು. ಕಂಪ್ಲಿ ಕ್ಷೇತ್ರ ಅಭಿವೃದ್ಧಿಯತ್ತ:*ಕಂಪ್ಲಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಕೊಡುಗೆ ನೀಡಿದೆ. ಅದೇರೀತಿಯಾಗಿ ಕುಡಿಯುವ ನೀರು, ಗ್ರಂಥಾಲಯ, ರಸ್ತೆ, ಕೆರೆಗಳ ಅಭಿವೃದ್ಧಿ, ಏತ ನೀರಾವರಿ, 100 ಬೆಡ್ ಆಸ್ಪತ್ರೆ, ಮಿನಿ ವಿಧಾನಸೌಧ ನಿರ್ಮಾಣ, ತಾಪಂ ಕಚೇರಿ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಕಂಪ್ಲಿ ಕ್ಷೇತ್ರವು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು.ಕೆಲಸಗಳು ಮಾತನಾಡುತ್ತವೆ.
ಟೀಕೆ-ಪ್ರಹಾರಗಳು ಸಾಯುತ್ತವೆ. ಅವೆಲ್ಲವುಗಳನ್ನು ಮೆಟ್ಟಿನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರವು ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ. ಈ ಸರ್ಕಾರದಲ್ಲಿ ಶಾಸಕನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದರಲ್ಲದೆ, ಜನರು ಮುಂಬರುವ ದಿನಗಳಲ್ಲಿ ಜನಾಶೀರ್ವಾದ ಮಾಡುವ ಮೂಲಕ ಕೆಲಸ ಮಾಡುವ ಅವಕಾಶ ನೀಡಬೇಕು ಎಂದು ಹೇಳಿದರು.ಈ ವೇಳೆ ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ಕಂಪ್ಲಿ ತಹಶೀಲ್ದಾರರಾದ ಜೂಗಲ ಮಂಜುನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ, ಬೆರಳಚ್ಚುಗಾರ ಹನುಮೇಶ್.ಹೆಚ್., ಛಾಯಾಗ್ರಾಹಕ ಶ್ರೀಧರ್ ಕಾವಲಿ, ವಾಹನ ಚಾಲಕ ಮಲ್ಲೇಶಪ್ಪ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಕಂಪ್ಲಿ ವಿಭಾಗದ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಇದ್ದರು.*ಜ.14 ರ ವರೆಗೆ ವೀಕ್ಷಿಸಲು ಅವಕಾಶ:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರಿ್ಡಸಿರುವ ವಸ್ತು ಪ್ರದರ್ಶನವು ಕಂಪ್ಲಿ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಜ.14 ರ ವರೆಗೆ ಇರಲಿದೆ.
ಈ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದ್ದು, ಭೇಟಿ ನೀಡಿ ವೀಕ್ಷಿಸಬಹುದು.*ವಸ್ತು ಪ್ರದರ್ಶನದ ಮಾಹಿತಿ:*ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ರೂಪಿಸಿರುವ ಕಾರ್ಯಕ್ರಮಗಳಾದ ಬುಡಕಟ್ಟು ಕಲೆ ಮತ್ತು ಸಂಸ್ಕೃತಿ, ಪರಿಶಿಷ್ಟ ಪಂಗಡ ಪೌಷ್ಟಿಕ ಆಹಾರ ಯೋಜನೆ, ಲಿಡ್ಕರ್ ಅನುಷ್ಠಾನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿವಾಹಗಳಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಆಯವ್ಯಯ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕ್ರೈಸ್ ವಸತಿ ಶಾಲೆಗಳಿಗೆ ಪ್ರವೇಶ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಶೈಕ್ಷಣಿಕ ಉತ್ತೇಜನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಪ್ರತಿಭಾವಂತರಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿದ್ಯಾರ್ಥಿ ವೇತನ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ನಿಗಮ-ಮಂಡಳಿಗಳು, 2011 ರ ಜನಗಣತಿಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆ ಶೇಕಡವಾರು ಮಾಹಿತಿ ಫಲಕ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 