ಸರ್ಕಾರ ಯಾವುದೇ ಪ್ರಯತ್ನ ಮಾಡಿದರು ವನಹಳ್ಳಿ ಶಾಲೆಯನ್ನು ಬಿಟ್ಟುಕೊಡುವುದಿಲ್ಲ. ಸರ್ಕಾರಕ್ಕೆ ಎಚ್ಚರಿಕೆ -ಯೋಗೇಶ್ ಹುಂಬಿ
The government will not give up Vanahalli school no matter what efforts it makes. Warning to the go
ಧಾರವಾಡ 06: ವನಹಳ್ಳಿ ಗ್ರಾಮಸ್ಥರು ಊರಿನ ದೇವಸ್ಥಾನದ ಎದುರು ಎಐಡಿಎ?ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, 70 ವರ್ಷದಾಟಿದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎ?ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಹೆಬ್ಬಳ್ಳಿಯ ಸರಕಾರಿ ಹಿರಿಯ ಬಾಲಕರ ಮಾದರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ವನಹಳ್ಳಿ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 225 ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡರೈತ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರೆದು, ವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ, ತಲವಾಯಿ ಕಿರಿಯ ಪ್ರಾಥಮಿಕ ಶಾಲೆ ಮತ್ತು , ಮಾರಡಗಿ ಉರ್ದುಕಿರಿಯ ಪ್ರಾಥಮಿಕ ಶಾಲೆ, ಹೆಬ್ಬಳ್ಳಿಯ ಉರ್ದುಕಿರಿಯ ಪ್ರಾಥಮಿಕ ಶಾಲೆ, ಹೆಬ್ಬಳ್ಳಿಯ ಜನತಾ ಪ್ಲಾಟ್ ಹಿರಿಯ ಪ್ರಾಥಮಿಕ ಶಾಲೆ, ಶಿವಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ 6 ಶಾಲೆಗಳನ್ನು ಮುಚ್ಚಿ ಹೆಬ್ಬಳ್ಳಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಲಾಗುತ್ತಿದೆ. ಈ ರೀತಿ ಕೇವಲ ಧಾರವಾಡ ಜಿಲ್ಲೆಯಲ್ಲೇ 500 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್‌ಡಿಎಂಸಿ ತಲೆಯ ಮೇಲೆ ಹೊರೆಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತದೆ.
ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿದೂರ ತಳ್ಳುವ ಹುನ್ನಾರ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಸಿಂಗನಹಳ್ಳಿ ಶಾಲೆ ಉಳಿಸುವ ಹೋರಾಟಕ್ಕಾಗಿ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯನ್ನು ರಚಿಸಲಾಯಿತು. ಹೋರಾಟ ಸಮಿತಿಯ ಕಾರ್ಯದರ್ಶಿಗಳಾದ ಯೋಗೇಶ್ ಹುಂಬಿ ಮಾತನಾಡಿ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ನಮ್ಮ ವನಹಳ್ಳಿ ಶಾಲೆ ಮುಚ್ಚಿದರೆ ನಮ್ಮ ಮಕ್ಕಳನ್ನು ಖಂಡಿತ ನಾವು ಹೆಬ್ಬಳ್ಳಿಗೆ ಕಳಿಸಲು ಸಾಧ್ಯವಿಲ್ಲ ಯಾಕೆಂದರೆ ಇಲ್ಲಿಯವರೆಗೂ ನಮ್ಮಊರಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ ಅದಲ್ಲದೆ ಇಲ್ಲಿಯ ಜನರೆಲ್ಲಾ ಹೊಲದ ಕೆಲಸಕ್ಕೆ ಹೋದರೆ ಬರುವುದೇ ರಾತ್ರಿಯಾವ ಭರವಸೆಯ ಮೇಲೆ ನಾವು ಬೇರೆಊರಿಗೆ ನಮ್ಮ ಮಕ್ಕಳನ್ನು ಕಳಿಸಬೇಕು.
ಸರ್ಕಾರಕ್ಕೆ ಕಿಂಚಿತ್ತಾದರೂ ಕಾಳಜಿ ಇದ್ದಿದ್ದರೆ ಮೂಲಭೂತ ಸೌಕರ್ಯಗಳನ್ನು ಕೊಟ್ಟು ನಮ್ಮ ಶಾಲೆಯನ್ನು ಬಲಪಡಿಸಬೇಕಿತ್ತು ಅದನ್ನು ಬಿಟ್ಟು ಮುಚ್ಚಿ ಹಾಕುತಿದ್ದಾರೆ. ಇದನ್ನು ನಮ್ಮೂರಿನ ಎಲ್ಲ ಗ್ರಾಮಸ್ಥರು ತೀವ್ರವಾಗಿ ವಿರೋಧಿಸುತ್ತೇವೆ. ನಮ್ಮ ಮಕ್ಕಳು ನಮ್ಮೂರಿನ ಶಾಲೆಯಲ್ಲಿ ಕಲಿಯುತ್ತಾರೆ. ಇಷ್ಟಾಗಿಯೂ ಸರ್ಕಾರ ನಮ್ಮಊರಿನ ಶಾಲೆಯನ್ನು ಮುಚ್ಚಲು ಮುಂದುವರೆದರೆ ವನಹಳ್ಳಿ ಗ್ರಾಮಸ್ಥರೆಲ್ಲ ಒಗ್ಗಟ್ಟಿನಿಂದ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಿಂಧೂ ಕೌದಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷರಾದ ವೀರಭದ್ರಯ್ಯ ಚಿಕ್ಕಮಠ, ಕಲ್ಲಪ್ಪ ರಾಮನಾಳ, ಚಂದ್ರಶೇಖರ್ ಹಿರೇಮಠ, ಮಾಂತೇಶ ಮೆಣಸಿನಕಾಯಿ, ಇಮಾಮಸಾಬ್, ಕಲ್ಲಪ್ಪ ಮೆಣಸಿನಕಾಯಿ ಊರಿನ ಗ್ರಾಮಸ್ಥರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 