ಕುವೆಂಪು ಸಾಹಿತ್ಯದಲ್ಲಿ ಸಂವಿಧಾನದ ಆಶಯ ಒಳಗೊಂಡಿದೆ- -ಡಾ.ಹೊನ್ನಪ್ಪ ಹೊನ್ನಪ್ಪನವರ
The ideals of the Constitution are embodied in Kuvempu literature - -Dr. Honnappa Honnappa's
ಹಾವೇರಿ 19 : "ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ನ್ಯಾಯ, ಪ್ರಜ್ಞೆ, ಸಂವಿಧಾನದ ಆಶಯ ಒಳಗೊಂಡಿದೆ" ಎಂದು ಡಾ. ಹೊನ್ನಪ್ಪ ಹೊನ್ನಪ್ಪನವರ ಹೇಳಿದರು. ರಾಣಿಬೆನ್ನೂರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ 'ಕುವೆಂಪು ಅವರ ಸಾಹಿತ್ಯದಲ್ಲಿ ಸಂವಿಧಾನಿಕ ನೆಲೆಗಳು' ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.
"ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ 'ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ' ಎಂದು ಹೇಳುವುದರ ಮೂಲಕ ಈ ಸಮಾಜದಲ್ಲಿ ಯಾರು ಮೇಲು-ಕೀಳು ಎಂಬುದಿಲ್ಲ. ಎಲ್ಲರೂ ಸಮಾನರೇಂದು ಹೇಳಿದ್ದಾರೆ. ಕುವೆಂಪು ಅವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದಬೇಕು" ಎಂದರು. "ಜಾತಿ, ಧರ್ಮ ಮೌಢ್ಯದ ಹೆಸರಿನಲ್ಲಿ ಇಂದಿನ ಯುವಕರು ಬಲಿಯಾಗುತ್ತಿದ್ದಾರೆ. ಹಾಗಾಗಿ ಕುವೆಂಪು ಅವರು ಜಾತಿಗೆ ಸಿಲುಕಬೇಡಿ, ಅದರಿಂದ ಹೊರ ಬನ್ನಿ ಮನುಜ ಮತ ಸೇರ ಬನ್ನಿ" ಎಂದಿದ್ದಾರೆ" ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಾನಪದ ವಿವಿ ಕುಲಸಚಿವ ಡಾ. ಶಿವಶಂಕರ ಕೆ ಅವರು ಮಾತನಾಡಿ, "ಕುವೆಂಪು ಅವರ ಸಾಹಿತ್ಯವನ್ನು ಓದಬೇಕು. ಕಷ್ಟದ ನಡುವೆಯು ನಗುವನ್ನು, ಸಂತೋಷವನ್ನು ತುಂಬವ ಸಾಹಿತ್ಯ ರಚಿಸಿದ್ದಾರೆ" ಎಂದರು. ಮುಖ್ಯ ಅತಿಥಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ಅವರು ಮಾತನಾಡಿ, "ಧರ್ಮ, ಜಾತಿ, ಲಿಂಗದ ಆಧಾರದ ಮೇಲೆ ಕೆಳ ವರ್ಗದವರಿಗೆ ಶಿಕ್ಷಣ ಪಡೆದುಕೊಳ್ಳಲು ಆಗುತ್ತಿರಲಿಲ್ಲ. ಅಂಬೇಡ್ಕರ್, ಜ್ಯೋತಿ ಬಾ ಪುಲೆ ಅಂತಹ ಮಹಾನ್ ವ್ಯಕ್ತಿಗಳ ಹೋರಾಟದಿಂದ ಎಲ್ಲರಿಗೂ ಶಿಕ್ಷಣ ಪಡೆಯಲು ಸಾಧ್ಯವಾಗಿದೆ" ಎಂದು ಹೇಳಿದರು.
ಚಕೋರ ಸಾಹಿತ್ಯ ವೇದಿಕೆ ಜಿಲ್ಲಾ ಸಂಚಾಲಕ ಮಾರುತಿ ತಳವಾರ ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆಕೊಂಡು ಸಾಹಿತ್ಯದ ಕಡೆ ಅಭಿರುಚಿ ಹೆಚ್ಚಿಸಿಕೊಳ್ಳಬೇಕು" ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಆಶಿಕಾ.ಎಚ್.ಸಿ ಇತರರು ಉಪಸ್ಥಿತರಿದ್ದರು. ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕರು ಶೇಖರ ಭಜಂತ್ರಿ ಸ್ವಾಗತಿಸಿದರು. ಗೋವಿಂದಪ್ಪ.ಜಿ ಅವರು ನಿರೂಪಿಸಿದರು. ಪುಟ್ಟಪ್ಪ ಲಮಾಣಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 