ಮಹನೀಯರ ವಿಚಾರಧಾರೆಗಳು ಪ್ರತಿ ಮನೆ ಮನೆಗೂ ಮುಟ್ಟಬೇಕು: ಸಚಿವ ಸತೀಶ ಜಾರಕಿಹೊಳಿ
The ideas of eminent personalities should reach every household: Minister Satish Jarkiholi
ಬೆಳಗಾವಿ 28: ಇಂದು ನಾವೆಲ್ಲರೂ ಒಂದು ಗೂಡಿ ಜಾತಿ ಮುಕ್ತ ಭಾರತವನ್ನು ಕಟ್ಟಬೇಕಾಗಿದೆ. ಡಾ. ಬಿ. ಬಿ.ಆರ್.ಅಂಬೇಡ್ಕರ ಮತ್ತು ಬಸವಣ್ಣನವರ ಕನಸು ಕೂಡ ಅದೇ ಆಗಿತ್ತು. ಅಂತಹ ಮಹನೀಯರ ವಿಚಾರಧಾರೆಗಳು, ನೈತಿಕ ತತ್ವಗಳು ಇಂದು ಪ್ರತಿ ಮನೆಮನೆಗೂ ಮುಟ್ಟಬೇಕು, ಈ ನಿಟ್ಟಿನಲ್ಲಿ ಇಂತಹ ವಿಚಾರ ಸಂಕೀರಣಗಳು ಸಹಕಾರಿಯಾಗುತ್ತವೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ.ಬಿ. ಆರ್. ಅಂಬೇಡ್ಕರ ಅಧ್ಯಯನ ಪೀಠ ಹಾಗೂ ಸಮಾಜ ಕಾರ್ಯ ವಿಭಾಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ. ಆರ್. ಅಂಬೇಡ್ಕರ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಡಾ. ಬಿ. ಎಸ್. ಜಿರಗೆ ಸಭಾಭವನದಲ್ಲಿ ಶನಿವಾರದಂದು ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ" ವಿವೇಚನೆ, ವೈಚಾರಿಕತೆ ಮತ್ತು ಗಣರಾಜ್ಯ: ಡಾ.ಬಿ. ಆರ್. ಅಂಬೇಡ್ಕರ್" ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದ ಮಹನೀಯರನ್ನು ಪರಿಚಯಿಸುವ ಕಠಿಣ ಕಾಲ ಇಂದು ಎದುರಾಗಿದೆ. ಹೀಗಾಗಿ 'ನಾವೆಲ್ಲರೂ ಒಂದೆ" ಎಂಬ ಸಂದೇಶವನ್ನು ನಾವು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಂತದಲ್ಲಿಯೇ ಮಕ್ಕಳಲ್ಲಿ ಬಿತ್ತಬೇಕು ಎಂದು ಸಲಹೆ ನೀಡಿದರು.
ಡಾ. ಬಿ. ಆರ್. ಅಂಬೇಡ್ಕರ ಅವರನ್ನು ತಿಳಿದುಕೊಳ್ಳುವ ಕೂತಹಲ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ. ಅವರ ಕೂತಹಲ ಮತ್ತು ಉತ್ಸಾಹವನ್ನು ಹೆಚ್ಚಿಸಲು ಇಂತಹ ವಿಶೇಷ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪ್ರತಿವರ್ಷ ಜರುಗಬೇಕು ಎಂದು ಹೇಳಿದರು.
ಖ್ಯಾತ ಚಿಂತಕ ಮತ್ತು ಕನ್ನಡ ಪ್ರಾಧ್ಯಾಪಕ ಡಾ. ರಾಜಪ್ಪ ದಳವಾಯಿ ಮಾತನಾಡಿ, ವೈಚಾರಿಕ ತಳಹದಿಯಲ್ಲಿ ರಚನೆಗೊಂಡ ನಮ್ಮ ದೇಶದ ಸಂವಿಧಾನ ಪ್ರಜ್ಞೆಯ ದ್ಯೋತಕವಾಗಿದೆ. ನಾವು ಜಾತಿ ಚೌಕಟ್ಟನ್ನು ಮೀರಿ ಬೆಳೆಯಬೇಕು. ಪ್ರಗತಿ ಎಂಬದು ಕೇವಲ ಕಟ್ಟಡ, ಸೇತುವೆ, ಜಲಾಶಯಗಳ ನಿರ್ಮಾಣಕ್ಕೆ ಸೀಮಿತಗೊಳ್ಳದೆ ಜನರಲ್ಲಿ ಪ್ರಜ್ಞೆಯನ್ನು ವಿಸ್ತರಿಸುವ ಸಂಗಾತಿಯಾಗಬೇಕು, ಸಂವಿಧಾನ ಉಳಿದರೆ ಮಾತ್ರ ನಮ್ಮೆಲ್ಲರ ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿಯುತ್ತದೆ ಎಂದು ಹೇಳಿದರು.
ಸಮಾಜಕ್ಕೆ ಉತ್ತಮ ಪ್ರಜೆಗಳನ್ನ ಮತ್ತು ಜ್ಞಾನಿಗಳನ್ನು ತಯಾರು ಮಾಡಿ ಕಳಿಸುವುದು ವಿಶ್ವವಿದ್ಯಾಲಯಗಳ ಬಹುಮುಖ್ಯ ಜವಾಬ್ದಾರಿಯಾಗಿದೆ. ಜ್ಞಾನ ಶಾಖೆಯ ಮುಖ್ಯಪ್ರತಿನಿಧಿಯಂತಿದ್ದ ಅಂಬೇಡ್ಕರ ಅವರಿಂದ ಸ್ಫೂರ್ತಿ ಪಡೆದು ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ ತರಬೇತಿ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಪ್ರಾಧ್ಯಾಪಕ, ಪ್ರೊ.ಜೆ. ಸೋಮಶೇಖರ ಮಾತನಾಡಿ, ಸದ್ಯದ ಕಾಲಘಟ್ಟಕ್ಕೆ ಜ್ಞಾನ ತುಂಬಿದ ಸಮಾಜವನ್ನು ನಿರ್ಮಿಸುವ ಅವಶ್ಯಕತೆಯಿದೆ. ಬಸವಣ್ಣನವರು ಬಿತ್ತಿದ ಕಾಯಕದ ಬೀಜವನ್ನ, ವೈಚಾರಿಕತೆಯ ನೆಲೆಯಲ್ಲಿ ವಿಸ್ತರಿಸುವ ಪ್ರಯತ್ನವನ್ನ ಮಂತ್ರಿಗಳು ಮಾಡುತ್ತಿದ್ದಾರೆ ಹಾಗೂ ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಪರಿಕಲ್ಪನೆಯನ್ನು ಮತ್ತಷ್ಟು ವಿಸ್ತರಿಸುವ ಕೆಲಸವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇಂತಹ ಕಾರ್ಯಕ್ರಮಗಳ ಮೂಲಕ ಮಾಡುತ್ತಿದೆ.
ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಸ್ವಾಗತ ಭಾಷಣದಲಿ ್ಲಮಾತನಾಡಿ, ವಿಶ್ವವಿದ್ಯಾಲಯಕ್ಕೆ ಬೇಕಾದ ಸವಲತ್ತುಗಳನ್ನು ನೀಡಲು ಮಾನ್ಯ ಮಂತ್ರಿಗಳು ಸದಾ ಮುಂಚೂಣಿಯಲ್ಲಿರುತ್ತಾರೆ. ಅವರ ಕೊಡುಗೆಗಳಿಂದ ವಿದ್ಯಾರ್ಥಿಗಳು ಮತ್ತಷ್ಟು ಶಕ್ತಿಯುತರಾಗುತ್ತಾರೆ. ಹಿರೇಬಾಗೇವಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕ್ಯಾಂಪಸ್ಗೆ ಸುಮಾರು 9 ಕೋಟಿ 80 ಲಕ್ಷ ಅನುದಾನ ನೀಡಿದ್ದನ್ನು ಅವರು ಸ್ಮರಿಸಿದರು.
ಬೆಳಗಾವಿ ನಗರ ಉತ್ತರ ಭಾಗದ ಶಾಸಕ ಆಸೀಫ್ (ರಾಜು) ಸೇಠ, ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹನುಮಣ್ಣವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎನ್.ಪಾಟೀಲ್, ಹಣಕಾಸು ಅಧಿಕಾರಿ ಎಂ.ಎ.ಸಪ್ನಾ, ಡಾ.ಬಿ.ಆರ್.ಅಂಬೇಡ್ಕರ ಪೀಠದ ನಿರ್ದೇಶಕ ಪ್ರೊ.ಅಶೋಕ ಡಿಸೋಜಾ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾದ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕುಲಸಚಿವ ಸಂತೋಷ ಕಾಮಗೌಡ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 