ನೇಮಕಾತಿಯ ದಾಖಲೆಗಳ ಪರೀಶೀಲನೆಗೆ ಅರ್ಹರಾದವರ ಪಟ್ಟಿ ವೆಬಸೈಟ್ ದಲ್ಲಿ ನಾಳೆ ಪ್ರಕಟ; ಜ.7 ರಂದು ಮೂಲ ದಾಖಲೆಗಳ ಪರೀಶೀಲನೆ
ಧಾರವಾಡ .21: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಮೂಲ ದಾಖಲೆಗಳ ಪರೀಶೀಲನೆಗಾಗಿ ದಿನಾಂಕ: 21-12-2024 ರಂದು ಧಾರವಾಡ ಜಿಲ್ಲಾ ವೆಬ್ ಸೈಟ್ ಣಣಠಿ://ಜಚಿಡಿತಿಚಿಜ.ಟಿಛಿ.ಟಿ ನಲ್ಲಿ ಪ್ರಕಟಿಸಲಾಗುವುದು.
ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರೀಶೀಲನೆಗೆ ದಿನಾಂಕ: 07-01-2025 ರಂದು ಬೆಳಿಗ್ಗೆ 10.30 ಗಂಟೆಗೆ "ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ, ನೂತನ ಸಭಾ ಭವನ" ಇಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಯವರ ಕಛೇರಿಯ ದೂರವಾಣಿ ಸಂಖ್ಯೆ: 0836-2233880, 2233840 ನೇದ್ದಕ್ಕೆ ಕರೆ ಮಾಡಿ ಸಿಬ್ಬಂದಿ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದುಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.