ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಶೋಭಾಯಮಾನವಾದ ಪಂಚಕಳಸಗಳು
The magnificent Panchakalasas on the throne of Sri Gavisiddheshwara
ಕೊಪ್ಪಳ 01 : ಸಂಸ್ಥಾನ ಶ್ರೀಗವಿಮಠದಲ್ಲಿಂದು ಇಂದು ದಿನಾಂಕ 01-01-2026 ರಂದು ಗುರುವಾರ ಮಧ್ಯಾಹ್ನ 2;00ಗಂಟೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಪಂಚಕಳಸಗಳು ಶೋಭಾಯಮಾನ ವಾದವು. ಸಾಮಾನ್ಯವಾಗಿ ಎಲ್ಲ ಮಠಮಾನ್ಯಗಳಿಗೆ ಒಂದೇ ಕಳಸವಿರುತ್ತದೆ. ಆದರೆ ಕೊಪ್ಪಳದ ಶ್ರೀಗವಿಮಠದ ಕರ್ತೃ ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಐದು ಕಳಸಗಳು ಶೋಭಾಯಮಾನವಾಗಿರುತ್ತವೆ. ರಥೋತ್ಸವದ ದಿವಸಗಳು ಸಮೀಪಿಸುತ್ತಿರುವಾಗ ಈ ಐದು ಕಳಸಗಳನ್ನು ಒಂದು ವಾರದ ಮೊದಲೇ ಕೆಳಗೆ ಇಳಿಸಿಕೊಂಡು ಆಯಾ ಓಣಿಯ ದೈವದವರು ಕೊಂಡೊಯ್ಯುತ್ತಾರೆ.
ನಂತರ ಆವುಗಳನ್ನು ಶೃಂಗಾರಗೊಳಿಸಿ ಶ್ರೀಗವಿಮಠಕ್ಕೆ ಶ್ರಧ್ದಾ ಭಕ್ತಿಯಿಂದ ಭಜನೆ, ಡೋಲು, ಭಕ್ತಿ ಭಾವದಿಂದ ಶ್ರೀಮಠಕ್ಕೆ ತರುತ್ತಾರೆ. ಈ ಪಂಚಕಳಸಗಳನ್ನು ಆಯಾ ಓಣಿಯ ದೈವದವರು ಶ್ರೀ ಗವಿಮಠಕ್ಕೆತಂದು ಏರಿಸಿ ಪೂಜೆ ಮಾಡಿಸಿ ಪ್ರಸಾದ ಪಡೆದು ಮರಳುತ್ತಾರೆ. ಇದು ಪ್ರತಿವರ್ಷದ ಸಂಪ್ರದಾಯ ಹಾಗೂ ಪದ್ಧತಿ. ಭಕ್ತರು ಶ್ರೀಗವಿಮಠದ ಗೋಪುರಕ್ಕೆ ಏರಿಸಿದ ಐದು ಕಳಸಗಳನ್ನು ನೋಡಿ ಪುಳಕಿತರಾಗುತ್ತಾರೆ.
ಜಂಗಮಾರಾಧನೆ:
ಶ್ರೀ ಗವಿಸಿದ್ಧೇಶ್ವರ ಜತ್ರಾ ಮಹೋತ್ಸವದ ನಿಮಿತ್ಯ ಶ್ರೀಮಠದಲ್ಲಿ ಅನೇಕ ಧಾರ್ಮಿಕ ವಿಧಿ ವಿಧಾನಗಳ ಕಾರ್ಯಗಳು ಜರುಗುತ್ತವೆ. ಪಂಚ ಕಳಸಗಳ ಕಳಸಾರೋಹಣ ನಂತರ ಇದೇ ಉರಿನ ಎಲ್ಲ ಜಂಗಮ ಪುಂಗವರಿಗೆ ಭೂರಿ ಭೋಜನ ಪ್ರಸಾದ, ಜಂಗಮರಾಧನೆ ಕಾರ್ಯ ಅನೂಚಾನವಾಗಿ ನಡೆದು ಬಂದಿದೆ. ಪ್ರಸಾದದತರು ವಾಯ ದಕ್ಷಿಣೆ ಹಾಗೂ ತಾಂಬೂಲಾಧಿಗಳನ್ನು ನೀಡಿಜಂಗಮ ಯೋಗಿಗಳ ಸಮಾರಾಧನೆಯು ನೆರವೇರಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 